Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ: ಕಿಂಗ್​​ಪಿನ್ ಅರೆಸ್ಟ್

ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್​​ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್​ನಲ್ಲಿ ಬಂಧಿಸಲಾಗಿದೆ.

ನಕಲಿ ಅಂಕಪಟ್ಟಿ ಜೊತೆಗೆ ನಕಲಿ ವಿಶ್ವವಿದ್ಯಾಲಯ ಸೃಷ್ಟಿ ಮಾಡಿ ಅದರ ಹೆಸರಲ್ಲಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ. ಕರ್ನಾಟಕದ ಬೆಂಗಳೂರು, ಮೈಸೂರು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿ ಮಾಡುತ್ತಿದ್ದ.

ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ: ಕಿಂಗ್​​ಪಿನ್ ಬಂಧನ

ಬಂಧಿತ ಆರೋಪಿ ರಾಜೀವ ಸಿಂಗ್ ಆರೋರಾ ಕಳೆದ ಏಳೆಂಟು ವರ್ಷಗಳಿಂದ ನಕಲಿ ಅಂಕ ಪಟ್ಟಿ ತಯಾರಿ ಮಾಡುತ್ತಿದ್ದ. ಪಿಯುಸಿ, ಡಿಪ್ಲೋಮಾ ಇನ್ ಎಜುಕೇಶನ್, ಡಿಪ್ಲೋಮಾ ಆಫ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಾಕ್ಟರ್ ಆಫ್ ಫಿಲಾಸಫಿ, ಬಿ ಟೇಕ್ ಸೇರಿ ವಿವಿಧ ಕೋರ್ಸ್​​ಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ.

ಸದ್ಯ ಬಂಧಿತನಿಂದ ಬರೋಬ್ಬರಿ 522 ನಕಲಿ ಅಂಕಪಟ್ಟಿಗಳು, 1626 ಖಾಲಿ ಅಂಕಪಟ್ಟಿಗಳು, 36 ಮೊಬೈಲ್, 2 ಲ್ಯಾಪ್‌ ಟಾಪ್, 1 ಪ್ರಿಂಟರ್​​, ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್​​ಗಳು, ಎಟಿಎಂ ಕಾರ್ಡ್ ಮತ್ತು ಆರೋಪಿಯ 123 ನಕಲಿ ಐಡಿಗಳು, ಆರೋಪಿಯ 85 ಬ್ಯಾಂಕ್ ಅಕೌಂಟ್​​​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

Related posts

Leave a Comment