Mangalore and Udupi news
Blog

ಇಸ್ರೇಲ್ ಸೇನೆಗೆ 15 ಸಾವಿರ ಭಾರತೀಯರ ನೇಮಕ..! ಮೋದಿ ವಿರುದ್ಧ ಖರ್ಗೆ ಗಂಭೀರ ಆರೋಪ

ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅ. 5 ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆದಿದೆ. ಈ ವೇಳೆಯಲ್ಲೇ ಖರ್ಗೆ ಮೋದಿ ವಿರುದ್ದ ಹರಿಹಾಯ್ದಿದ್ದಾರೆ. ಮೋದಿ ಸರ್ಕಾರದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಸಹಕಾರ ಒಪ್ಪಂದವು ಪಶ್ಚಿಮ ಏಷ್ಯಾ ಯುದ್ಧಕ್ಕಾಗಿ ಇಸ್ರೇಲ್ ಸೇನೆಗೆ ಸುಮಾರು 15,000 ಭಾರತೀಯರನ್ನು ನೇಮಕ ಮಾಡಿಕೊಳ್ಳಲು ಅನುಕೂಲ ಮಾಡಿಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಸಹಕಾರ ಒಪ್ಪಂದವು ಪಶ್ಚಿಮ ಏಷ್ಯಾ ಯುದ್ಧಕ್ಕಾಗಿ ಇಸ್ರೇಲ್ ಸೇನೆಗೆ ಸುಮಾರು 15,000 ಭಾರತೀಯರನ್ನು ನೇಮಕ ಮಾಡಿಕೊಳ್ಳಲು ಅನುಕೂಲ ಮಾಡಿಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ದೇಶದ ಹಲವು ಯುವಕರು ವಂಚಕ ಏಜೆಂಟರುಗಳ ಮಾತನ್ನು ನಂಬಿ ರಷ್ಯಾ ಪರ ಉಕ್ರೇನ್ ಯುದ್ಧದಲ್ಲಿ ಪಾಲ್ಗೊಂಡು ಪ್ರಾಣ ಕಳೆದುಕೊಂಡರು ಎಂದು ಅವರು ಹೇಳಿದ್ದಾರೆ. ಇದು ಮೋದಿ ಸರ್ಕಾರದ ಯುವಕರ ವಿರೋಧಿ ನೀತಿಗಳಿಂದ ಸೃಷ್ಟಿಯಾಗಿರುವ ದೇಶದ ನಿರುದ್ಯೋಗವನ್ನು ಬಿಂಬಿಸುತ್ತದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಕೌಶಲ್ಯವಿಲ್ಲದ, ಅರೆ ಕುಶಲ ಮತ್ತು ವಿದ್ಯಾವಂತ ಯುವಕರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಯುದ್ಧಪೀಡಿತ ದೇಶಗಳಲ್ಲಿ ಹೆಚ್ಚಿನ ಸಂಬಳಕ್ಕಾಗಿ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ ಎನ್ನುತ್ತಿವೆ ವರದಿಗಳು. ಇದರರ್ಥ ಉದ್ಯೋಗ ಸೃಷ್ಟಿ ಕುರಿತಾದ ನಿಮ್ಮ ಹೇಳಿಕೆಗಳು ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸೃಷ್ಟಿಸಿದ ಸುಳ್ಳಲ್ಲದೆ ಬೇರೇನು ಅಲ್ಲ ಎಂಬುದಾಗಿದೆ’ ಎಂದು ಕಿಡಿಕಾರಿದ್ದಾರೆ.

ಯುದ್ಧಪೀಡಿತ ದೇಶಗಳಲ್ಲಿ ಬಲವಂತವಾಗಿ ಉದ್ಯೋಗಕ್ಕೆ ಸೇರುವಂತೆ ಹರಿಯಾಣದ ಯುವಕರಿಗೆ ಒತ್ತಡ ಹಾಕಲಾಗಿದೆ. ನಾಳಿನ ಚುನಾವಣೆಯಲ್ಲಿ ಜನತೆ ಸರಿಯಾದ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಯುದ್ಧ ನಡೆಯುತ್ತಿರುವ ಈ ಸಮಯದಲ್ಲಿ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಸಹಕಾರದಡಿ ಇಸ್ರೇಲ್ ಸೇನೆಗೆ ಹದಿನೈದು ಸಾವಿರ ಭಾರತೀಯರ ನೇಮಕಕ್ಕೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Congress president Mallikarjun Kharge accused the Modi government of facilitating the recruitment of Indian workers in Israel amidst the ongoing conflict in West Asia. In a post on X, Kharge claimed that around 15,000 Indian workers were being sent to Israel through the government’s National Skill Development Corporation (NSDC).

Related posts

Leave a Comment