Mangalore and Udupi news
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು “ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3” ದಿನಾಂಕ ಫಿಕ್ಸ್.?!

ಮಂಗಳೂರಿನಲ್ಲಿ ಖ್ಯಾತಿ ಪಡೆದಿರುವ ಉತ್ಸವಗಳಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟ ಕೂಡ ಒಂದು. ಈ ಬಾರಿಯ “ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3″ರ ದಿನಾಂಕ ಫಿಕ್ಸ್ ಆಗಿದೆ. ಜನವರಿ 18 ರಿಂದ 22ರವರೆಗೆ ನಡೆಯಲಿದೆ.

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ನಡೆಯಲಿದ್ದು, ಜನವರಿ 18ರ ಸಂಜೆ ಜಿಲ್ಲೆಯ ಹಲವು ಗಣ್ಯ ಅತಿಥಿಗಳಿಂದ ಸೀಸನ್-3ಗೆ ಅಧಿಕೃತ ಚಾಲನೆ ದೊರೆಯಲಿದೆ. ಕರಾವಳಿ ಉತ್ಸವ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವ ದವರೆಗೆ ಪ್ರತಿ ನಿತ್ಯ ಸಂಜೆ 4ರಿಂದ ರಾತ್ರಿ 10 ರವರೆಗೆ ಈ ಆಹಾರೋತ್ಸವ ನಡೆಯಲಿದೆ.

ಸ್ಟ್ರೀಟ್ ಫುಡ್ ಫಿಯೆಸ್ಟಾಗೆ ಎಲ್ಲಾ ತಯಾರಿಗಳು ಭರದಿಂದ ಸಾಗಿದ್ದು ಈಗಾಗಲೇ ಆನ್ ಲೈನ್ ಮೂಲಕ ನೂರಕ್ಕೂ ಅಧಿಕ ಸಂಖ್ಯೆಯ ಆಹಾರ ಮಳಿಗೆಗಳು ನೋಂದಾಯಿಕೊoಡಿದೆ. ಕೆಲವೇ ಕೆಲವು ಮಳಿಗೆಗಳು ಮಾತ್ರ ಬಾಕಿ ಉಳಿದಿವೆ. ಆಸಕ್ತರು ಕೂಡಲೇ ಆನ್ ಲೈನ್ ಮೂಲಕವೇ ನೋಂದಾಯಿಸಿಕೊಳ್ಳುವoತೆ ಮನವಿ ಮಾಡಿದ್ದಾರೆ. ಕಳೆದ ಎರಡು ಆವೃತ್ತಿಗಳ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನಮನ್ನಣೆ ಪಡೆದು ಅತ್ಯಂತ ಯಶಸ್ವಿಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಸೀಸನ್-3 ಗೆ ಕ್ಷಣಗಣನೆ ಆರಂಭವಾಗಿದ್ದು ಸಾರ್ವಜನಿಕ ವಲಯದಲ್ಲಿ ಅತ್ಯುತ್ತಮ ಸ್ಪಂದನೆ ಹಾಗೂ ನಿರೀಕ್ಷೆ ಗರಿಗೆದರಿದೆ.

ಹಿಂದಿನAತೆಯೇ ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ವಿಶಿಷ್ಟವಾದ ಕರಾವಳಿ ಖಾದ್ಯ, ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ, ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ. ಅದರಲ್ಲೂ ಈ ಬಾರಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ಸಸ್ಯಾಹಾರಿ ಮತ್ತು ಮಾಂಸಹಾರಿಗಳಿಗೆ ಪ್ರತ್ಯೇಕ ಕೌಂಟರ್ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

Mangaluru: Street Food Fiesta Season-2 kicks off in city - Daijiworld.com

ಇನ್ನುಳಿದಂತೆ ಈ ಹಿಂದೆ ಇದ್ದಂತಹ ಹತ್ತು ಹಲವು ಮನರಂಜನಾ ಕಾರ್ಯಕ್ರಮಗಳು ಈ ಬಾರಿಯೂ ಸಹ ಇರಲಿದ್ದು ಮಕ್ಕಳ ಆಟದ ಜೋನ್ ಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದ್ದು, ಐದೂ ದಿನಗಳಲ್ಲಿ ಏಕಕಾಲಕ್ಕೆ ಹಲವು ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾನ್ವಿತರಿಗಾಗಿ ನಮ್ಮ ವೇದಿಕೆ- ನಿಮ್ಮ ಪ್ರತಿಭೆ, ಸೆಲ್ಫಿ ಕೌಂಟರ್, ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲು ಅವಕಾಶ, ಹೀಗೆ ಹತ್ತು ಹಲವು ಮನರಂಜನಾ-ಸಾoಸ್ಕೃತಿಕ ಕಾರ್ಯಕ್ರಮಗಳು ಇರಲಿವೆ.

ಸಾರ್ವಜನಿಕರ ಸುರಕ್ಷತೆಗೆ ವಿಶೇಷ ಆದ್ಯತೆಯ ಜೊತೆಗೆ ಆಹಾರೋತ್ಸವ ನಡೆಯುವಲ್ಲಿ ಸ್ವಚ್ಛತೆಯ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದo  ತಿರಲು ಈ ಬಾರಿಯೂ ಕ್ರಮಬದ್ಧವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು ನಿಗದಿತ ಸ್ಥಳಗಳಲ್ಲದೇ, ರಸ್ತೆಯ ಬದಿಯಲ್ಲಿ ಎಲ್ಲಿಯೂ ವಾಹನ ಪಾರ್ಕಿಂಗ್ ಮಾಡದೇ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ.

Advertisement

Related posts

Leave a Comment