
ಮಂಗಳೂರು: ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಖಾಸಗಿ ಕಾಲೇಜಿನ ವಿದ್ಯಾರ್ಥಿ ಓರ್ವ ಅಸುನೀಗಿದ್ದಾರೆ. ನಗರದ ಫಳ್ನೀರ್‌ನಲ್ಲಿ ಜನವರಿ 15 ರಂದು ಈ ಘಟನೆ ನಡೆದಿದೆ. ಅತ್ತಾವರ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ.
ಗೆಳೆಯರೊಂದಿಗೆ ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಶಹೀಮ್ ಅವರು ಏಕಾಏಕಿ ಕೋರ್ಟ್ನಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದರು.