Mangalore and Udupi news
ಅಪರಾಧಕಾಸರಗೋಡುಪ್ರಸ್ತುತಮಂಗಳೂರು

ನಕಲಿ ವೈದ್ಯನ ಉಚಿತ ವೈದ್ಯಕೀಯ ಶಿಬಿರ: ನಕಲಿ ಡಾಕ್ಟರ್ ಅರೆಸ್ಟ್.!!

ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.‌

ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಬಂಧಿತ ನಕಲಿ ವೈದ್ಯ. ಮಂಜೇಶ್ವರ ಎಸ್‌ಐ ಕೆ.ವಿ. ಸುಮೇಶ್‌ರಾಜ್ ನಕಲಿ ವೈದ್ಯನನ್ನು ಉಪ್ಪಳ ಪಚ್ಚಂಪಾರೆಯಿಂದ ಬಂಧಿಸಲಾಗಿದೆ.

ಅಲ್ಲಿನ ಫ್ರೆಂಡ್ಸ್‌ಕ್ಲಬ್‌ನಲ್ಲಿ ಜಮಾಲುದ್ದೀನ್‌ನ ನೇತೃತ್ವದಲ್ಲಿ ಶಿಬಿರ ನಡೆಸಲಾಗಿತ್ತು. ಯಾವುದೇ ಅರ್ಹತೆಯೋ, ದಾಖಲೆ ಪತ್ರಗಳೂ ಇಲ್ಲದೆ ರೋಗಿಗಳನ್ನು ತಪಾಸಣೆ ನಡೆಸಿ ಔಷಧಿ ನೀಡಿದನೆಂಬ ಆರೋಪದಂತೆ ಈತನನ್ನು ಬಂಧಿಸಲಾಗಿದೆ.

ನಕಲಿ ವೈದ್ಯ ವೈದ್ಯಕೀಯ ಶಿಬಿರ ನಡೆಸುತ್ತಿರುವ ಬಗ್ಗೆ ಜಿಲ್ಲಾ ಮೆಡಿಕಲ್ ಆಫೀಸ‌ರ್ ಕೆ. ಸಂತೋಷ್‌ರಿಗೆ ಮಾಹಿತಿ ಲಭಿಸಿತ್ತು. ಈ ಕುರಿತು ತನಿಖೆ ನಡೆಸಲು ಡೆಪ್ಯುಟಿ ಜಿಲ್ಲಾ ಮೆಡಿಕಲ್ ಆಫೀಸರ್‌ರಿಗೆ ಹೊಣೆಗಾರಿಕೆ ನೀಡಲಾಗಿದೆ. ಜಿಲ್ಲಾ ಮೆಡಿಕಲ್ ಆಫೀಸರ್ ಸ್ಥಳಕ್ಕೆ ಧಾವಿಸಿ ನಡೆಸಿದ ಪರಿಶೀಲನೆಯಲ್ಲಿ ಜಮಾಲುದ್ದೀನ್‌ಗೆ ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದಿರುವುದು ದೃಢವಾಗಿದೆ.

ಅನಂತರ ಡಿಎಂಓ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಜಮಾಲುದ್ದೀನ್ ವಿರುದ್ಧ ಬೇರೆಲ್ಲಾದರೂ ಕೇಸುಗಳಿವೆಯೇ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Kasaragod: Manjeshwara Police have arrested a man who was found posing as a doctor and treating the people of Pachlampare in Uppala during a recent health camp organized in Uppala. The arrested man, identified as 56-year-old CM Jamaluddin, a native of Mannarkad in Palakkad, the officers have said.

The organizers of the health camp in Uppala, ‘Pachlampare Club’, turned suspicion on finding Jamaluddin treating and also prescribing medicines to patients who attended the health camp, and filed a police complaint.

Manjeshwara Police, who arrived at the spot and inspected the matter, have arrested Jamaluddin. It is learned that the arrested man has organized similar health camps at many places earlier and treated people suffering from ill-health.

Related posts

Leave a Comment