Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಳ್ಳಾಲ: ಪೆಡ್ಲರ್ ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಕಿಂಗ್ ಪಿನ್ ಅರೆಸ್ಟ್.!! ಮತ್ತೆ 1.5 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ

ಉಳ್ಳಾಲ : ಆಂಟಿ ಡ್ರಗ್ ಟೀಮ್ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಎಂಬಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಉಳ್ಳಾಲದ ಮೂವರು ಪೆಡ್ಲರ್ ಗಳನ್ನ ಬಂಧಿಸಿ ಸುಮಾರು 1.5 ಲಕ್ಷ ಮೌಲ್ಯದ 50 ಗ್ರಾಂ ಡ್ರಗ್ ವಶಡಿಸಿಕೊಂಡಿತ್ತು. ಸದ್ಯ ಡ್ರಗ್ ಪೂರೈಸುತ್ತಿದ್ದ ಬೆಳ್ತಂಗಡಿ ಮೂಲದ ಕಿಂಗ್ ಪಿನ್ ಓರ್ವನನ್ನ ಬಂಧಿಸಿದ್ದು ಮತ್ತೆ 1.5 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ಅಲ್ಪಾಝ್(24) ಅಲಿಯಾಸ್ ಅಲ್ಪಾ ಪ್ಯಾಬ್ಲೊ ಎಂಬವನನ್ನು ಅರೆಸ್ಟ್ ಮಾಡಲಾಗಿದೆ.

ಈತನಿಂದ 53 ಗ್ರಾಂ ಎಂಡಿಎಂಎ ಮಾದಕ ವಸ್ತು, ಸ್ಕೋಕ್ ಪಾಟ್, ಸ್ವಿಝ್ ಡಿಜೈರ್ ಕಾರು, 2 ಮೊಬೈಲ್ ಸೇರಿ ಒಟ್ಟು 7,76,980/- ಮೌಲ್ಯದ ಸೊತ್ತನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಒಟ್ಟು ಪ್ರಕರಣದಲ್ಲಿ 103 ಗ್ರಾಂ ಎಮ್ ಡಿಎಮ್‌ಎ ಹಾಗೂ 15,52,980 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ಹಿನ್ನೆಲೆ:

ಕಳೆದ ಸೋಮವಾರ ಆಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಎಂಬಲ್ಲಿನ ನಿರ್ಜನ ಕೈಗಾರಿಕಾ ಪ್ರದೇಶದಲ್ಲಿ ಎಮ್ ಡಿಎಮ್ ಎ ಮಾರಾಟ ಮಾಡುತ್ತಿದ್ದ ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್ (22), ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್ (27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್ (28) ಎಂಬ ಮೂವರು ಬಂಧಿಸಿತ್ತು.ಬಂಧಿತರಿಂದ ಪೆಡ್ಲರ್ (T) ಗಳನ್ನ 1.50,000/- ಅಂದಾಜು ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುಕೃತ್ಯಕ್ಕೆ ಬಳಸಿದ್ದ ಬೆಲೆನೋ ಕಾರು, 3 ಮೊಬೈಲ್ ಫೋನ್‌ಗಳು ,ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆ ಸೇರಿದಂತೆ 7.76,980/- ಮೌಲ್ಯದ ಸೊತ್ತನ್ನ ವಶಪಡಿಸಿಕೊಳ್ಳಲಾಗಿತ್ತು. ಸದ್ಯ ಮತ್ತೆ ಕಾರ್ಯಾಚರಣೆ ಮುಂದುವರೆಸಿದ ಪೊಲೀಸರು ಡ್ರಗ್ ಪೂರೈಕೆ ಮಾಡುತ್ತಿದ್ದ ಕಿಂಗ್ ಪಿನ್ ಮೊಹಮ್ಮದ್ ಅಲ್ಪಾಝ್ ನನ್ನು ಹೆಡೆಮುರಿ ಕಟ್ಟಿದ್ದಾರೆ.

Related posts

Leave a Comment