Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: MDMA ಮಾರಾಟ ಮಾಡುತ್ತಿದ್ದ ಮೂವರು ಯುವಕರು ಅರೆಸ್ಟ್.!!

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಪಜೀರು ಗ್ರಾಮದ ಕಂಬಳಪದವು ಬಳಿ ನಡೆದಿದೆ.

ಬಂಧಿತ ಆರೋಪಿಗಳನ್ನು ತಲಪಾಡಿಯ ಮರಿಯ ಚರ್ಚ್ ಕಂಪೌoಡ್ ನಿವಾಸಿ ಗೌತಮ್(22), ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್(27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್(28) ಎಂದು ಗುರುತಿಸಲಾಗಿದೆ.

ಸಿಪಿ ಧನ್ಯಾ ನಾಯಕ್ ನೇತೃತ್ವದ ಆಂಟಿ ಡ್ರಗ್ ಟೀಮ್ ಕಾರ್ಯಾಚರಣೆಯಲ್ಲಿ ಈ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

ಪಜೀರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪ: ಮೂವರ ಬಂಧನ

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ನ.25ರ ಸೋಮವಾರ ಆರೋಪಿಗಳು ಕಾರಿನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿoದ 1.50,000 ರೂ. ಅಂದಾಜು ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಮಾರಾಟ ಮಾಡಲು ಬಳಸಿದ ಕಾರು ಮತ್ತು 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ 7,76,980 ರೂ. ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Comment