
ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಸಂಜೆ ವೇಳೆಗೆ ಫ್ರಾನ್ಸ್ ತಲುಪಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ 3ನೇ ಆವೃತ್ತಿಯ ಕೃತಕ ಬುದ್ಧಿಮತ್ತೆ (AI) ಆ್ಯಕ್ಷನ್ ಶೃಂಗಸಭೆಯ ಸಹ-ಅಧ್ಯಕ್ಷತೆಯನ್ನು ಪ್ರಧಾನಿ ಮೋದಿ ವಹಿಸಲಿದ್ದಾರೆ.
ಇನ್ನು ತಮ್ಮ ಫ್ರಾನ್ಸ್ ಭೇಟಿಯನ್ನು ʻಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧ ಬಲಪಡಿಸುವ ಪ್ರಮುಖ ಕ್ಷಣ.. ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. AI ಮತ್ತು ಪರಮಾಣು ಶಕ್ತಿ ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸುವುದಾಗಿ ಹೇಳಿದ್ದಾರೆ.
ಫ್ರಾನ್ಸ್ ಪ್ರವಾಸದ ಬಳಿಕ ಫೆಬ್ರವರಿ 12ರಂದು ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ ಮೋದಿ ಅಮೆರಿಕಕ್ಕೆ ತೆರಳಲಿದ್ದಾರೆ. ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಲಿರುವ ಪ್ರಧಾನಿ ಮೋದಿ, ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಚರ್ಚಿಸಲಿದ್ದಾರೆ.