
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ.
ಇಡಿ ನೀಡಿರುವ ಸಮನ್ಸ್ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿದ್ದು, ಇಡಿ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ನ ಇತ್ತೀಚಿನ ತೀರ್ಪು ಇದ್ದು, ಆರೋಪಿಗೆ ಸಮನ್ಸ್ ಜಾರಿಗೊಳಿಸಬೇಕೆಂಬ ನಿಯಮವಿಲ್ಲ ಎಂದರು.