ಮಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಇದೀಗ 80 ಪರ್ಸೆಂಟ್ ಸರ್ಕಾರವಾಗಿದೆ. ಇದು ಕಳ್ಳರ, ಭ್ರಷ್ಟಚಾರಿಗಳ ಸರ್ಕಾರ ಎಂದು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ವಾ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಸಂವಿಧಾನದ ಹೆಸರಲ್ಲಿ ಮಾತನಾಡುವ ಸಿಎಂ ನೈತಿಕತೆಯಿಂದ ರಾಜೀನಾಮೆ ನೀಡಬೇಕು. ತನಿಖೆಗೆ ಆದೇಶ ಆಗಿದೆ. ರಾಜ್ಯಪಾಲರ ಆದೇಶವನ್ನೇ ಪ್ರಶ್ನೆ ಮಾಡಿದ್ರೆ ಆತ್ಮವೇ ಇಲ್ಲ ಎನ್ನುವಂತೆ. ಇನ್ನು ಆತ್ಮಸಾಕ್ಷಿ ಎಲ್ಲಿಂದ ಬಂತು ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಮೊದಲಿಗೆ ರಾಜೀನಾಮೆ ಕೊಟ್ಟು ತನಿಖೆಗೆ ಆದೇಶ ಮಾಡಬೇಕಿತ್ತು. ಆಗ ಅವರ ಆದರ್ಶಗಳ ಮೇಲೆ ಇನ್ನಷ್ಟು ಗೌರವ ಹೆಚ್ಚಾಗುತ್ತಿತ್ತು ಎಂದು ಟಾಂಗ್ ಕೊಟ್ಟರು.
ಚುನಾವಣಾ ಬಾಂಡ್ ಪ್ರಕರಣದಲ್ಲಿ ನಿರ್ಮಲಾ ಸೀತಾರಾಮನ್ ಹಾಗೂ ನಮ್ಮೆಲ್ಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೇಸ್ ಹಾಕಿದವರು ಯಾರೋ ಸಂಬಂಧವೇ ಇಲ್ಲದ ಮೂರನೇ ವ್ಯಕ್ತಿ. ಸದ್ಯ ಎಫ್‌ಐಆರ್‌ಗೆ ತಡೆಯಾಜ್ಞೆ ಸಿಕ್ಕಿದೆ. ಚುನಾವಣಾ ಬಾಂಡ್ ಸರಿಯಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಿದ್ದರಾಮಯ್ಯ ಕೇಸ್ ಹಾಗಲ್ಲ. ಮುಡಾ ಹಾಗೂ ವಾಲ್ಮೀಕಿ ಹಗರಣ ಸೇರಿ ಎರಡರಲ್ಲೂ ಸಿಕ್ಕಿ ಬಿದ್ದಿದ್ದಾರೆ ಎಂದು ಎಂದು ಹೇಳಿದರು.
Mangalore: The Congress, which accused the BJP government of 40 percent corruption, is now an 80 percent government. Former MP and former BJP state president Nalin Kumar Kateel has slams congress, government of thieves and corrupt people.