ಉಡುಪಿ: ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಪರ್ಕಳ ಬಸ್ ನಿಲ್ದಾಣದ ಹಿಂಭಾಗದಲ್ಲಿ ಇರುವ ಶ್ರೀ ಸಾಯಿ ಲಾಡ್ಜ್ ನಲ್ಲಿ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ.
ಜ. 19ರ ಭಾನುವಾರ ದಾಳಿ ನಡೆಸಲಾಗಿದೆ. ಈ ವೇಳೆ ಆರೋಪಿತ ಶರಣಪ್ಪನನ್ನು ವಶಕ್ಕೆ ಪಡೆದು, ಮಹಿಳೆಯನ್ನು ರಕ್ಷಿಸಲಾಗಿದೆ. 143 ಭಾರತೀಯ ದಂಡ ಸಂಹಿತೆ 3,4,5,6 IಖಿP ಂಛಿಣ ರಂತೆ ಪ್ರಕರಣ ದಾಖಲಿಸಲಾಗಿದೆ.