Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್‌ ಹತ್ಯೆ..!!

ಹಾಸನದಲ್ಲಿ ಖಾಕಿ ನೆತ್ತರು ಹರಿದ್ದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್‌ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್‌ನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದವರಾದ ಹರೀಶ್.ವಿ (32) ಕೊಲೆಯಾದ ಪೊಲೀಸ್ ಕಾನ್ಸ್‌ಟೇಬಲ್.

ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾನ್ಸ್‌ಟೇಬಲ್ ಬರ್ಬರ ಹತ್ಯೆ

ಹರೀಶ್ ಬೆಂಗಳೂರಿನ KSISFನಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. ಇದೇ ತಿಂಗಳು 11 ರಂದು ಹರೀಶ್ ವಿವಾಹ ನಿಶ್ಚಯವಾಗಿತ್ತು. ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.‌

ಹಾಸನ: ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಹತ್ಯೆ | Hassan: Barbaric killing of police  constable

Related posts

Leave a Comment