
ಮಂಗಳೂರು: ಬಿಜೈಯ ಕಲರ್ಸ್ ಮಸಾಜ್ ಸೆಂಟರ್ ಗೆ ದಾಳಿ ನಡೆಸಿದ ಪ್ರಕರಣ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ವಶಕ್ಕೆ ಪಡೆದಿದ್ದಾರೆ.
ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ವಶಕ್ಕೆ ಪಡೆದಿದ್ದಾರೆ.
ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಸಾದ್ ಅತ್ತವಾರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಮ್ಮ ಸಂಘಟನೆಯ ಕಾರ್ಯಕರ್ತರು ಮಸಾಜ್ ಸೆಂಟರ್‌ಗೆ ನುಗ್ಗಿರುವುದಾಗಿ ಪ್ರಸಾದ್ ಅತ್ತಾವರ ಒಪ್ಪಿಕೊಂಡಿರುವುದು ವರದಿಯಾಗಿದೆ. ದಾಳಿ ನಡೆಸಿದ ಕಾರ್ಯಕರ್ತರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಘಟನೆ: ಕಲರ್ಸ್ ಸ್ಪಾ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ದಾಳಿ ಮಾಡಿದ್ದಾರೆ. ಈ ವೇಳೆ ಇಲ್ಲಿ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದೆ.
ಈ ವೇಳೆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಮಂಗಳೂರು ನಗರದಾದ್ಯಂತ ಇರೋ ಮಸಾಜ್ ಸೆಂಟರ್ ಗಳ ಮುಚ್ಚುವಂತೆ ರಾಮ ಸೇನಾ ಆಗ್ರಹಿಸಿದೆ. ಈ ಘಟನೆ ಕುರಿತಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ವಶಕ್ಕೆ ಪಡೆದಿದ್ದಾರೆ.