
ಬಂಟ್ವಾಳ : ಕಳ್ಳ ಬಟ್ಟಿ ತಯಾರಿಸುವ ಮನೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಅಬಕಾರಿ ಪೋಲೀಸರ ತಂಡ ಆರೋಪಿ ಸಹಿತ ಕಳ್ಳಬಟ್ಟಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ ಘಟನೆ ಪಂಜಿಕಲ್ಲು ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಕಂಬಲ್ದಡ್ಕ ನಿವಾಸಿ ರುಕ್ಮಯ ಪೂಜಾರಿ ಎಂಬವರ ಮನೆಗೆ ಅಬಕಾರಿ ಪೋಲೀಸರ ತಂಡ ದಾಳಿ ನಡೆಸಿದೆ.
ದಾಳಿ ವೇಳೆ ಅಕ್ರಮ 1.5 ಲೀಟರ್ ಸಾರಾಯಿ ಹಾಗೂ 55 ಲೀ.ಬೆಲ್ಲದ ಕೊಳೆ ಮತ್ತು ಕಳ್ಳಬಟ್ಟಿ ತಯಾರಿಸಲು ಬೇಕಾದ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಬಕಾರಿ ಉಪನಿರೀಕ್ಷಕ ರಾಜನಾಯ್ಕ್ ನೇತ್ರತ್ವದಲ್ಲಿ ದಾಳಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.