Mangalore and Udupi news
Blog

ಪ್ರಚೋದನಕಾರಿ ಹೇಳಿಕೆ: ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಈದ್ ಮೀಲಾದ್ ಮೆರವಣಿಗೆಗೆ ಸಂಬ0ಧಿಸಿದ0ತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಈ ನಡುವೆ ಬಿ.ಸಿ.ರೋಡ್ ನಲ್ಲಿ ಇಂದು ಬೆಳಗ್ಗೆ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಬಜರಂಗದಳ-ವಿ.ಎಚ್.ಪಿ ಬಿ.ಸಿ ರೋಡ್ ಚಲೋ ಕರೆ ನೀಡಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ಬಿ.ಸಿ.ರೋಡ್ ನಲ್ಲಿ ಜಮಾಯಿಸುತ್ತಿದ್ದು, ಪೊಲೀಸ್ ಸರ್ಪಗಾವಲು ಹಾಕಿದೆ.

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಬಿ.ಸಿ.ರೋಡ್ ನಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಬಿ.ಸಿ.ರೋಡ್ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ. ಗುಂಪು ಜಮಾಯಿಸಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕಲ್ಪಿಸಿದ್ದಾರೆ.

ಈ ಮಧ್ಯೆ ಬಜರಂಗದಳ ಮುಖಂಡ ಪುನೀತ್ ಅತ್ತಾವರ ಅವರನ್ನು ಮಂಡ್ಯದಲ್ಲಿ ಪೊಲೀಸರು ವಶಕ್ಕೆ ಪಡೆದಿದಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯದ ಪಾಂಡವಪುರದ RSS ಕಾರ್ಯಲಯಕ್ಕೆ ಆಗಮಿಸುವಾಗ ಪುನೀತ್ ಅತ್ತಾವರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂಧರ್ಭ ನಡೆದ ಹಿಂಸಾಚಾರ ನಂತರ ಪೊಲೀಸರು ಬಿಗಿ ಬಂದೋಬಸ್ತ್ ಹಾಕಿದ್ದಾರೆ.

ಮಂಗಳೂರಿನ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಮಾಡಿದ್ದ ಭಾಷಣಕ್ಕೆ ವ್ಯಕ್ತಿಯೋರ್ವ ಆಡಿಯೋ ರಿಲೀಸ್‌ ಮಾಡಿದ್ದು ತಾಕತ್ತಿದ್ದರೆ ಸೋಮವಾರದ ಈದ್ ಮಿಲಾದ್ ರ್ಯಾಲಿ ತಡೆಯಿರಿ ಎಂದು ಸವಾಲೋಡಿದ್ದರು. ಈ ಸವಾಲು ಸ್ವೀಕರಿಸಿದ ಪುನೀತ್ ಅತ್ತಾವರ ಬಿ.ಸಿ ರೋಡ್ ಚಲೋ ಮಾಡುವುದಾಗಿ ಘೋಷಿಸಿದ್ದರು.

ಕೋಮುಪ್ರಚೋದನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿರುವ ಅವರು ಸಾಮಾಜಿಕ ಜಾಲತಾಣಗಳ ಮೇಲೆಯೂ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಪುರಸಭಾ ಸದಸ್ಯ ಹಸೈನಾರ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಅದೇರೀತಿ ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ವಿರುದ್ಧ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related posts

Leave a Comment