
ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಫೆ. 5ರ ಬುಧವಾರ ಮುಂಜಾನೆ ನಡೆದಿದೆ.
ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ದಿ. ಪುರುಷೋತ್ತಮ ಎಂಬವರ ಪುತ್ರ ಚೇತನ್(44)ಮೃತಪಟ್ಟ ವ್ಯಕ್ತಿ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.