Mangalore and Udupi news
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪುತ್ತೂರು: ಕಂದಕಕ್ಕೆ ಉರುಳಿದ ಕಾರು ಮೂವರ ದುರ್ಮರಣ.!!

ಪುತ್ತೂರು: ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ದಾರುಣ ಘಟನೆ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪರ್ಲಡ್ಕ ಬೈಪಾಸ್ ನಲ್ಲಿ ನಡೆದಿದೆ.

ಮೃತರನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ(85), ಅವರ ಪುತ್ರ ಚಿದಾನಂದ ನಾಯ್ಕ(58) ಮತ್ತು ನೆರೆಮನೆ ನಿವಾಸಿ ರಮೇಶ್ ನಾಯ್ಕ (68) ಎಂದು ಗುರುತಿಸಲಾಗಿದೆ.

ಪುತ್ತೂರು: ಕಂದಕಕ್ಕೆ ಉರುಳಿದ ಕಾರು;  ಮೂವರು ಮೃತ್ಯು

ಆಲ್ಟೊ ಕಾರಿನಲ್ಲಿ ಗೋಂದೊಳ್ ಪೂಜೆಗೆ ಪುತ್ತೂರಿನ ಪುಣಚಕ್ಕೆ ಆಗಮಿಸಿದ್ದರು. ಬೆಳ್ಳಂಬೆಳಿಗ್ಗೆ ನಿದ್ರೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು ಸಂಚಾರಿ ಪೊಲೀಸ್‌ ಠಾಣೆಯ ಸಬ್ ಇನ್ಸೆಕ್ಟರ್ ಉದಯ ರವಿ ಹಾಗೂ ಎಫ್.ಎಸ್.ಐ. ಎಲ್ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Related posts

Leave a Comment