Mangalore and Udupi news
ದಕ್ಷಿಣ ಕನ್ನಡಪ್ರಸ್ತುತ

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ನಿಧನ

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸೆ.25ರ ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Related posts

Leave a Comment