Mangalore and Udupi news
ಅಪರಾಧದಕ್ಷಿಣ ಕನ್ನಡಪ್ರಸ್ತುತ

“ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಿಕೆ”  ;  ರಮಿತಾ ಶೈಲೇಂದ್ರ

ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣಿಯೂರು ಎಂಬ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂ**ಯರಾಗಿದ್ದಾರೆ ಎಂಬುದು ನನ್ನ ಬಳಿ ದಾಖಲೆ ಇದೆ ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು ಭಜನೆಗೆ ಹೋಗುತ್ತಿರುವಂತಹ ಹೆಣ್ಣು ಮಕ್ಕಳ ಬಗ್ಗೆ ಅಸಹ್ಯವಾಗಿ ಮಾತನಾಡಿರುತ್ತಾರೆ.

ತನ್ನ ಮನೆಯ ಹೆಣ್ಣು ಮಕ್ಕಳನ್ನು ಅಸಹ್ಯ ರೀತಿಯಲ್ಲಿ ನೋಡುವ ಮನಸ್ಥಿತಿ ಇರುವಂತಹ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಯಿಂದ ಮಾತ್ರ ಇಂತಹ ಮಾತುಗಳು ಬರುವಂತಹದ್ದು ಒಬ್ಬ ಸರಕಾರಿ ಉನ್ನತ ಮಟ್ಟದ ಹುದ್ದೆಗಳಲ್ಲಿ ಇರುವಂತಹ ವ್ಯಕ್ತಿಯ ನಾಲಗೆಯಲ್ಲಿ ಇಂತಹ ಮಾತುಗಳು ಸಂಸ್ಕಾರ ಹೀನ ಮಾತುಗಳು ಬರುವುದು ಶೋಭೆಯಲ್ಲ.

ಹಿಂದೂ ಸಂಸ್ಕೃತಿಯಲ್ಲಿ ಸ್ತ್ರೀ ಯನ್ನು ಮಾತೆಯ ರೂಪದಲ್ಲಿ ನೋಡಿರುವುದು ಹೊರತು ಇವರಂತಹ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವ್ಯಕ್ತಿಯ ಬಳಿ ಹೇಳಿಸಿಕೊಳ್ಳುವ ಪರಿಸ್ಥಿತಿ ನಮ್ಮ ಹಿಂದೂ ಸಮಾಜಕ್ಕೆ ಬಂದಿಲ್ಲ ಬಿಲ್ಲವ ಸಮಾಜದ ಮಾತೃಶಕ್ತಿ ಮತ್ತು ಭಜನಾ ಮಂಡಳಿಯ ಮಾತೃ ಶಕ್ತಿಗೆ ಮಾಡಿದ ಅವಮಾನಕ್ಕೆ ಹಾಗೂ ಹೆಣ್ಣು ಮಕ್ಕಳ ಚಾರಿತ್ರ್ಯವನ್ನು ವಧೆ ಮಾಡಿರುವುದು ತೀವ್ರ ಖಂಡನೀಯ.

ಈತನ ವಿರುದ್ಧ ಪೊಲೀಸ ಇಲಾಖೆ ಸುಮೋಟೋ ಕೇಸ್ ಅನ್ನು ದಾಖಲಿಸಿ ಕೂಡಲೇ ಬಂಧಿಸಬೇಕು ಹಾಗೂ ಸರಕಾರ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಸರಕಾರ ಕೆಲಸದಿಂದ ವಜಾ ಮಾಡಿ ಬಿಲ್ಲವ ಸಮಾಜದ ಹೆಣ್ಣು ಮಕ್ಕಳಿಗೆ ನ್ಯಾಯವನ್ನು ಒದಗಿಸಬೇಕೆಂದು ಆಗ್ರಹಿಸುತ್ತೇನೆ ಇಲಾಖೆಯು ಈತನ ಮೇಲೆ ಕಾನೂನು ಕ್ರಮವನ್ನು ತೆಗೆದುಕೊಳ್ಳದೆ ಆತನನ್ನು ಬಂಧಿಸದೆ ಬಿಟ್ಟರೆ ಹಿಂದೂ ಸಮಾಜದ ಹೆಣ್ಣು ಮಕ್ಕಳು ನೇರ ಆತನಿಗೆ ಪೊರಕೆ ಸೇವೆ ಮಾಡಬೇಕಾದಿತು.

ಆಡಿಯೋದಲ್ಲಿ ಏನಿದೆ?
ದೂರವಾಣಿಯಲ್ಲಿ ಮಾತನಾಡುವಾಗ “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣರಾಗಿದ್ದಾರೆ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು” ಎಂದು ಹಿಂದೂ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ.

ಎರಡು ಕಡೆ ಪ್ರತ್ಯೇಕ ದೂರು

ಸದ್ಯ ಸಂಜೀವ ಪೂಜಾರಿ ಕಾಣಿಯೂರು ಹೇಳಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಆಡಿಯೋ ವೈರಲ್ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಪೊಲೀಸ್​ ಠಾಣೆ ಸೇರಿದಂತೆ ಎರಡು ಕಡೆ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

ಅಂದಹಾಗೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎರಡು ದಿನಗಳ ಹಿಂದೆ ತನ್ನ ಫೇಸ್ ಬುಕ್ ಖಾತೆಯಲ್ಲಿ ಮುಸ್ಲಿಮರ ಪರವಾಗಿ ಪೋಸ್ಟ್ ಹಾಕಿದ್ದನು. ಸಹಾಯ ಮಾಡುವುದರಲ್ಲಿ ಮುಸ್ಲಿಮರು ಎತ್ತಿದ ಕೈ ಎಂದು ಪೋಸ್ಟ್ ಹಾಕಿದ್ದನು. ಈ ಪೋಸ್ಟ್ ವಿರೋಧಿಸಿ ಹಿಂದೂ ಕಾರ್ಯಕರ್ತ ಸುರೇಶ್ ಕಾಸರಗೋಡು ಅವರು ಸಂಜೀವ್​ ಪೂಜಾರಿಗೆ ಕರೆ ಮಾಡಿದ್ದರು. ದೂರವಾಣಿ ಮುಖಾಂತರ ಮಾತನಾಡುವಾಗ ಈ ಸ್ಟೇಟ್ಮೆಂಟ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

 

 

Related posts

Leave a Comment