Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಪಾರ್ಟಿಯಲ್ಲಿ ಯುವತಿ ಅತ್ಯಾಚಾರ – ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ.!!

ಮಂಗಳೂರು: ಪಾರ್ಟಿಗೆ ಆಗಮಿಸಿದ್ದ ಯುವತಿಗೆ ಪ್ರಜ್ಞೆ ತಪ್ಪುವ ಪದಾರ್ಥ ಬೆರೆಸಿದ್ದ ವೈನ್ ನೀಡಿ ಅತ್ಯಾಚಾರ ಎಸಗಿರುವ ಅಪರಾಧಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿನ ಶಿಕ್ಷೆ ಮತ್ತು  ದಂಡ ವಿಧಿಸಿ ಆದೇಶಿಸಿದೆ.

ನಗರದ ಲೈಟ್‌ಹೌಸ್ ಹಿಲ್ ರೋಡ್ ನಿವಾಸಿ ಬ್ರಯಾನ್ ರಿಚರ್ಡ್ ಅಮನ್ನಾ (34) ಶಿಕ್ಷೆಗೊಳಗಾದ ಆರೋಪಿ.

ಯುವತಿಯು ಬ್ಯಾಂಕೊಂದರಲ್ಲಿ ಉದ್ಯೋಗಿಯಾಗಿದ್ದು, ಆಕೆಗೆ ಬ್ಯಾಂಕ್‌ನ ಗ್ರಾಹಕರಾದ ನೌಕಾಪಡೆಯಲ್ಲಿ ಉದ್ಯೋಗಿ ಯಾಗಿದ್ದ ಜಾಯಿಲಿನ್ ಗ್ಲಾನೆಲ್ ಪಿಂಟೋ ಎಂಬವರ ಪರಿಚಯವಾಗಿತ್ತು. ಗ್ಲಾನೆಲ್‌ಗೆ ಅಂಡಮಾನ್‌ಗೆ ವರ್ಗಾವಣೆಯಾದ ನಿಮಿತ್ತ 2021ರ ಫೆ.5ರಂದು ರಾತ್ರಿ ಪುತ್ತೂರಿನ ಕೊಡಿಪ್ಪಾಡಿ ಗ್ರಾಮದ ಕೊಡಿಕಾಡು ಎಂಬಲ್ಲಿರುವ ಗೆಸ್ಟ್‌ಹೌಸ್‌ನಲ್ಲಿ ಸ್ನೇಹಿತರಿಗೆಲ್ಲ ಪಾರ್ಟಿ ಆಯೋಜಿಸಲಾಗಿತ್ತು. ಅದರಂತೆ ಯುವತಿಯೂ ಪಾರ್ಟಿಗೆ ಹಾಜರಾಗಿದ್ದರು.

ಈ ಸಂದರ್ಭ ಯುವತಿಯನ್ನು ಪರಿಚಯಿಸಿಕೊಂಡಿದ್ದ ರಿಚರ್ಡ್ ಬಳಿಕ ವೈನ್‌ಗೆ ಪ್ರಜ್ಞೆ ತಪ್ಪುವ ಅಮಲು ಪದಾರ್ಥವನ್ನು ಬೆರೆಸಿ ಅದನ್ನು ಯುವತಿಗೆ ಒತ್ತಾಯಪಡಿಸಿ ನೀಡಿದ್ದ. ಬಳಿಕ ಯುವತಿ ಕೊಠಡಿಗೆ ಹೋಗಿ ನಿದ್ದೆ ಮಾಡಿದ್ದಳು. ಎಚ್ಚರವಾದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ತಿಳಿದಿದೆ.

ಅದರಂತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಠಾಣಾ ನಿರೀಕ್ಷಕ ತಿಮ್ಮಪ್ಪ ನಾಯ್ಕ ತನಿಖೆ ಪೂರ್ಣಗೊಳಿಸಿ ಬ್ರಯಾನ್ ಅಮನ್ನಾ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್‌.ವಿ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 376ರಡಿ 10ವರ್ಷ ಕಠಿನ ಕಾರಾಗೃಹವಾಸ ಶಿಕ್ಷೆ ಮತ್ತು 10ಸಾವಿರ ರೂ. ದಂಡ, ಕಲಂ 378ರಡಿ 5ವರ್ಷ ಕಾರಾಗೃಹವಾಸದ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ನೊಂದ ಯುವತಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.

Advertisement

Related posts

Leave a Comment