Mangalore and Udupi news
Blogಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣ- ಆರೋಪಿ ಖುಲಾಸೆ

ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ  ನ್ಯಾಯಾಲಯ ಆದೇಶಿಸಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ.

2022 ಹಾಗೂ 2023ರಲ್ಲಿ ಎರಡು ಬಾರಿ ಆರೋಪಿಯು ಸಂತ್ರಸ್ತೆಯನ್ನು ಪುಸಲಾಯಿಸಿ ಆಕೆಯ ಮನೆಯಿಂದ ಮುರ್ಡೇಶ್ವರಕ್ಕೆ ಕರೆಸಿಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿದ್ದ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅನಂತರದಲ್ಲಿ ಉಡುಪಿ ಮಹಿಳಾ ಪೊಲೀಸ್‌ ಠಾಣೆಯ ನಿರೀಕ್ಷಕ ಜಯಾನಂದ ಕೆ. ಅವರು ಈ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಒಟ್ಟು 28 ಸಾಕ್ಷಗಳನ್ನು ಈ ಪ್ರಕರಣದಲ್ಲಿ ವಿಚಾರಣೆ ಮಾಡಿದ್ದು, 38 ದಾಖಲೆಗಳನ್ನು ಹಾಜರುಪಡಿಸಿತ್ತು. ಆದರೆ ಪ್ರಾಸಿಕ್ಯೂಷನ್‌ ಆರೋಪವನ್ನು ರುಜುವಾತುಪಡಿಸಲು ಸಾಧ್ಯವಾಗದ ಕಾರಣ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಆರೋಪಿ ಪರ ಉಡುಪಿಯ ವಕೀಲ ಪ್ರಸಾದ್ ಕುಮಾ‌ರ್ ಶೆಟ್ಟಿ ವಾದ ಮಂಡಿಸಿದ್ದರು.

Related posts

Leave a Comment