Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಬಾಲಕಿಯ ಅತ್ಯಾಚಾರ-ಮುಹಮ್ಮದ್ ಸಾದೀಕ್ ಗೆ ಕಠಿಣ ಶಿಕ್ಷೆ ಪ್ರಕಟ.!!

ಮಂಗಳೂರು : ಅಪ್ರಾಪ್ತೆಯನ್ನು ಅತ್ಯಾಚಾರಗೈದ ಆರೋಪಿಗೆ 20ವರ್ಷ ಕಠಿಣ ಶಿಕ್ಷೆ ಮತ್ತು 50ಸಾವಿರ ರೂ. ದಂಡ ವಿಧಿಸಿ ಆದೇಶಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೊಕ್ಸ್ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.

ಅಪರಾಧಿಯನ್ನು ಸಜಿಪ ಮುನ್ನೂರು ನಿವಾಸಿ ಮುಹಮ್ಮದ್ ಸಾದೀಕ್(24) ಎಂದು ಗುರುತಿಸಲಾಗಿದೆ.

ಮುಹಮ್ಮದ್ ಸಾದಿಕ್, 14ವರ್ಷ ಪ್ರಾಯದ ಬಾಲಕಿಯನ್ನು ಮೊಬೈಲ್ ಮೂಲಕ ಪರಿಚಯ ಮಾಡಿಕೊಂಡಿದ್ದ. ಬಳಿಕ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ 2023ರ ಮೇ ತಿಂಗಳಲ್ಲಿ ರಾತ್ರಿ ವೇಳೆ ಮನೆಗೆ ಬಂದು ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಬಳಿಕವೂ ಸಾದಿಕ್ ಬಾಲಕಿಯ ಮನೆಗೆ ಯಾರೂ ಇಲ್ಲದಿದ್ದಾಗ ಬಂದು ಅತ್ಯಾಚಾರ ಮಾಡಿದ್ದಾನೆ. ಬಾಲಕಿಯ ದೇಹದಲ್ಲಿ ಆಗಿರುವ ಬದಲಾವಣೆ ಗಮನಿಸಿ ತಾಯಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಆಕೆ 6ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ.

ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪೊಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬಂಟ್ವಾಳ ನಗರ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ. ತನಿಖೆ ಪೂರ್ಣಗೊಳಿಸಿ ದೋಷಾರೋಪಣೆ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಹಿನ್ನೆಲೆಯಲ್ಲಿ ಅಪರಾಧ ಸಾಬೀತಾಗಿದ್ದು, ಅಪರಾಧಿಗೆ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು 50,000ರೂ. ದಂಡ ವಿಧಿಸಿದ್ದಾರೆ. ದಂಡದ 50,000ರೂ. ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 6,50,000ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡುವಂತೆ ತೀರ್ಪಿನಲ್ಲಿ ನಿರ್ದೇಶಿಸಿದ್ದಾರೆ.

Advertisement

Related posts

Leave a Comment