
ಮಂಗಳೂರು: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮಂಗಳೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ 3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೆಡೆಟ್ ಲಿಶಾ ಡಿಎಸ್ ಮತ್ತು 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಕೆಡೆಟ್ ಸನತ್ ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ರಿಯೋ ಡಿಸೋಜ, ನಿರ್ದೇಶಕ ರೆ.ಫಾ.ವಿಲೈಡ್ ಪ್ರಕಾಶ್ ಡಿಸೋಜ, ಸಹಾಯಕ ನಿರ್ದೇಶಕ ರೆ.ಫಾ.ಕೆನೆತ್ ರೇನರ್ ಕ್ರಾಸ್ತಾ ಹಾಗೂ ಎನ್‌ಸಿಸಿ ಉಸ್ತುವಾರಿ ಅಭಿಜಿತ್ ಎಸ್ ಶುಭಹಾರೈಸಿದರು.