Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಹಾಡಹಗಲಲ್ಲೇ ಬಂದೂಕು ತೋರಿಸಿ ದರೋಡೆ.!!

Advertisement

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಕೆ.ಸಿ ರೋಡು ಬ್ರಾಂಚ್‌ನಲ್ಲಿ ಜ.17 ಶುಕ್ರವಾರ ಹಾಡಹಗಲಲ್ಲೇ ದರೋಡೆ ಕೃತ್ಯ ನಡೆದಿದೆ. ಬಂದೂಕು ತೋರಿಸಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಭಾರೀ ಪ್ರಮಾಣದ ದರೋಡೆ ಮಾಡಲಾಗಿದೆ.

ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಿಂದ ದರೋಡೆ ನಡೆದಿದೆ. ಬ್ಯಾಂಕ್ ಶಾಖೆಗೆ ನುಗ್ಗಿದ ಐವರು ಮಸೂಕುಧಾರಿಗಳು ಒಳಗಿದ್ದ ಐವರು ಸಿಬ್ಬಂದಿಗಳಿಗೆ ಬಂದೂಕು, ತಲ್ವಾರ್ ತೋರಿಸಿ ದರೋಡೆ ನಡೆಸಿದ್ದಾರೆ. ಐದು ಮಂದಿ ಆಗಂತುಕರ ತಂಡ ಈ ಕೃತ್ಯ ಎಸಗಿದೆ. ಫಿಯಟ್ ಕಾರಿನಲ್ಲಿ ಬಂದ ತಂಡ ಬ್ಯಾಂಕ್ ಸಿಬ್ಬಂದಿಗಳಿಗೆ ಬಂದೂಕು ತೋರಿಸಿ ದರೋಡೆ ನಡೆಸಿದೆ. ಚಿನ್ನ, ಒಡವೆ, ನಗದುಗಳನ್ನು ಕಳವು ಮಾಡಿದ ತಂಡ ಮಂಗಳೂರು ಕಡೆಗೆ ಪರಾರಿಯಾಗಿದೆ.

ತಲಪಾಡಿ ಕೆ.ಸಿ.ರೋಡ್: ಸಹಕಾರಿ ಸಂಘದಿಂದ ನಗನಗದು ದರೋಡೆ

ಕಾರಿನಲ್ಲಿ ಬಂದ ಐವರು ದರೋಡೆಕೋರರು ಶಾಖಾ ಕಚೇರಿಗೆ ನುಗ್ಗಿ ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಈ ವೇಳೆ ಕೆಲಸದಲ್ಲಿ ನಿರತರಾಗಿದ್ದ ಮಹಿಳಾ ಸಿಬ್ಬಂದಿ ಬೊಬ್ಬೆ ಹೊಡೆಯಲು ಮುಂದಾದಾಗ ಅವರನ್ನು ಹೆದರಿಸಿದ ದರೋಡೆ ಕೋರರು ನಗ ನಗದು ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸಿಪಿ ಧನ್ಯಾ ಇನ್ ಸ್ಪೆಕ್ಟರ್, ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

ದರೋಡೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಪಿಗಳ ಶೀಘ್ರ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ವಲಯ ಐಜಿ ಅಮಿತ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಎಸ್ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿ, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ.? ಎಷ್ಟು ಟೋಲ್ ಗೇಟ್ ಗಳನ್ನು ದಾಟಿ ಹೋಗಿದ್ದಾರೆ? ಟೋಲ್ ಗೇಟ್ ಗಳಲ್ಲಿ ಬಿಗಿ ಭದ್ರತೆ ಕೈಗೊಂಡಿಲ್ಲ ಯಾಕೆ ಎಂದು ಪ್ರಶ್ನಿಸಿದರು.

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು. ಎಲ್ಲಾ ಟೋಲ್ ಗೇಟ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

Related posts

Leave a Comment