Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುರಾಜ್ಯ

ಮಂಗಳೂರು: ಪ್ರತ್ಯೇಕ ಪ್ರಕರಣ – ಮಾದಕ ವಸ್ತು ಸೇವನೆ ಮಾರಾಟ 8 ಮಂದಿ ವಶಕ್ಕೆ.!!

Advertisement

ಮ0ಗಳೂರು : ಬರ್ಕೆ ಮತ್ತು ಬಂದರು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಂಡಿಎ0ಎ ಮಾರಾಟ ಹಾಗೂ ಗಾಂಜಾ ಸೇವನೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಮಂದಿ ಸೆರೆಯಾದ ಘಟನೆ ನಡೆದಿದೆ.

ಎಂಡಿಎ0ಎ ಮಾರಾಟ: 6 ಮಂದಿ ಬಂಧನ

ನಿಷೇಧಿತ ಮಾದಕ ವಸ್ತು ಎಂಡಿಎ0ಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ 6 ಮಂದಿಯನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಂಡೇಶ್ವರ ಗ್ರೀನ್‌ಲ್ಯಾಂಡ್ ಲೇಔಟ್ ನಿವಾಸಿ ಧನಿಶ್ ಡಿ. ಕಾಂಚನ್ (19), ಪಾಂಡೇಶ್ವರ ನಿವಾಸಿ ಪೃಥ್ವಿಕ್ (18), ಬಾವುಟಗುಡ್ಡ ನಿವಾಸಿ ಫೈಜ್ ಅಂಬರ್ (23), ಜಲ್ಲಿಗುಡ್ಡೆ ನಿವಾಸಿ ತುಷಾನ್ ಡಿ. ಸುವರ್ಣ (19), ಫಳ್ನೀರ್ ನಿವಾಸಿ ರಾಜಿನ್ (21), ಫಳ್ನೀರ್ ಸ್ಟರಕ್ ರೋಡ್ ನಿವಾಸಿ ಅಫ್ಘಾನ್ (20) ಬಂಧಿತ ಆರೋಪಿಗಳಾಗಿದ್ದಾರೆ.

ಫೆ.8ರಂದು ಸಂಜೆ 5:30ಕ್ಕೆ ಫಳ್ನೀರ್ ರಸ್ತೆಯ ಸಾರ್ವಜನಿಕ ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನದಲ್ಲಿ 6 ಮಂದಿ ಯುವಕರು ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯ ಮೇರೆಗೆ ಬಂದರು ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಳು ಯತ್ನಿಸಿದಾಗ ವಾಹನವನ್ನು ಅಡ್ಡಗಟ್ಟಿ ಆರೋಪಿಗಳನ್ನು ಬಂಧಿಸಿ 20.52ಗ್ರಾಂ ಎಂಡಿಎ0ಎ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳಲ್ಲದೆ ಕೃತ್ಯಕ್ಕೆ ಬಳಸಿದ್ದ ಕಾರು, ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗಾ0ಜಾ ಸೇವನೆ : ಇಬ್ಬರ ಬಂಧನ

ಬರ್ಕೆ ಮತ್ತು ಬಂದರು ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆಗೆ ಸಂಬ0ಧಿಸಿದ0ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಣ್ಣಗುಡ್ಡೆ ದುರ್ಗಾಮಹಲ್ ಜಂಕ್ಷನ್ ಬಳಿ ಅಮಲು ಪದಾರ್ಥ ಸೇವಿಸಿ ತೂರಾಡುತ್ತಿದ್ದ ಕೊಟ್ಟಾಯಂ ಜಿಲ್ಲೆ ಕರುಕಚಲ್ ತೊಪ್ಪಿಲ್ ಕೈಲಾತ್ ಕುಟ್ಟಪ್ಪಳ್ಳಿ ಮೂಲದ ಪ್ರಸಕ್ತ ನಗರದ ಕಾಪ್ರಿಗುಡ್ಡದಲ್ಲಿ ವಾಸವಾಗಿರುವ ಸೋನು ಸಾಜಿ (19) ಎಂಬಾತನನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾವುಟಗುಡ್ಡೆ ಬಳಿ ಅಮಲು ಪದಾರ್ಥ ಸೇವಿಸಿ ತೂರಾಡುತ್ತಿದ್ದ ಕೊಯಿಕ್ಕೋಡ್ ಪೊಟ್ಟಮಲ್ ಕುತ್ತಿರವಟ್ಟಂ ನಿವಾಸಿ ಜಗನ್‌ಜಿತ್ ಕೆ.ಎಸ್. (21) ಎಂಬಾತನನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Related posts

Leave a Comment