Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಅರ್ಚಕನೊಂದಿಗೆ ಸೆಕ್ಸ್ ಚ್ಯಾಟ್ – 10 ಲಕ್ಷ ಪಂಗನಾಮ.!!

Advertisement

ಕೇರಳದ ಅರ್ಚಕರೊಬ್ಬರನ್ನು ಫೇಸ್ ಬುಕ್ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊ0ಡು ಹಣಕ್ಕಾಗಿ ಬ್ಲಾಕ್ ಮೈಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಮ0ಗಳೂರು ತಾಲೂಕಿನ ಕೊಳಂಬೆ ನಿವಾಸಿ ಅಶ್ವಥ್ ಆಚಾರ್ಯ (33) ಬಂಧಿತ ವ್ಯಕ್ತಿ.

ಅಶ್ವತ್ ಆಚಾರ್ಯ ಫೇಸ್ ಬುಕ್‌ನಲ್ಲಿ ಕಾಸರಗೋಡು ಮೂಲದ ಅರ್ಚಕರೊಬ್ಬರೊಂದಿಗೆ ತಾನು ಯಕ್ಷಗಾನ ಕಲಾವಿದ ಎಂದು ಪರಿಚಯಿಸಿಕೊಂಡು ಫ್ರೆಂಡ್ ಆಗಿದ್ದ. ಬಳಿಕ ಇಬ್ಬರೂ ಆನ್‌ಲೈನ್‌ನಲ್ಲಿ ಸಂಪರ್ಕದಲ್ಲಿದ್ದು, ಲೈಂಗಿಕವಾಗಿ ಆಕರ್ಷಿಸಿ ಸೆಕ್ಸ್ ಸಂಬ0ಧಿಸಿ ಇಬ್ಬರೂ ಚಾಟ್ ಮಾಡುತ್ತಿದ್ದರು. ಇದೇ ವೇಳೆ ಒಬ್ಬರಿಗೊಬ್ಬರು ಫೋಟೋ, ವಿಡಿಯೋ ಷೇರ್ ಮಾಡಿಕೊಂಡಿದ್ದು, ಇದನ್ನೇ ಮುಂದಿಟ್ಟು ಅರ್ಚಕನನ್ನು ಅಶ್ವಥ್ ಆಚಾರ್ಯ ಬ್ಲಾಕ್ ಮೈಲ್ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೆ, ತಾನು ಯುವತಿಯಾಗಿ ಲಿಂಗ ಬದಲಾಯಿಸಿಕೊಳ್ಳುತ್ತೇನೆ, ಅದಕ್ಕಾಗಿ ಅಗತ್ಯವಿದೆ ಎಂದೂ ನಂಬಿಸಿದ್ದಾನೆ.

ಹಣದ ಬ್ಲಾಕ್ ಮೈಲ್ ಒಳಗಾದ ಅರ್ಚಕ ಕಳೆದ ನವೆಂಬರ್ ತಿಂಗಳಿನಿ0ದ 10.50 ಲಕ್ಷ ರೂ. ಹಣವನ್ನು ಮೊಬೈಲ್ ಆಪ್ ಮತ್ತು ಬ್ಯಾಂಕ್ ಮೂಲಕ ಆರೋಪಿ ಖಾತೆಗೆ ಪಾವತಿಸಿದ್ದರು. ಪೌರೋಹಿತ್ಯ ನಡೆಸುತ್ತಿದ್ದ ಅರ್ಚಕನಲ್ಲಿ ಮತ್ತಷ್ಟು ಹಣ ನೀಡದಿದ್ದರೆ ವಿಡಿಯೋ, ಫೋಟೊ ಜಾಲತಾಣದಲ್ಲಿ ಹಾಕುತ್ತೇನೆಂದು ಬೆದರಿಸಿದ್ದಾನೆ. ಇದರಿಂದ ಬೇಸತ್ತ ಅರ್ಚಕ ಫೆ.5ರಂದು ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ, ಕಾಸರಗೋಡು ಡಿವೈಎಸ್ಪಿ ಸುನಿಲ್ ಕುಮಾರ್ ನೇತೃತ್ವದ ಪೊಲೀಸರು ಆರೋಪಿಯನ್ನು ಮಂಗಳೂರಿನ ಮನೆಯಿಂದಲೇ ನಡುರಾತ್ರಿಯಲ್ಲಿ ಬಂಧಿಸಿ ಕರೆದೊಯ್ದಿದ್ದಾರೆ. ಅರ್ಚಕ 3 ಲಕ್ಷವನ್ನು ಗೂಗಲ್ ಪೇಯಲ್ಲಿ ಪಾವತಿಸಿದ್ದರೆ, 7.5 ಲಕ್ಷವನ್ನು ಹಂತಹ0ತವಾಗಿ ಮೂರು ಬಾರಿ ಬ್ಯಾಂಕ್ ಖಾತೆ ಮೂಲಕ ಪಾವತಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಬೇರೆಯವರನ್ನೂ ಬ್ಲಾಲ್ ಮಾಡಿದ್ದಾನೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

Leave a Comment