Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಶ್ರಫ್ – ಒಂದು ವಾರದಲ್ಲಿ ಜಾಮೀನು.!!

ವಿಟ್ಲ: ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಆಕ್ರೋಶಿತರು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ.

ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ನಡೆದಿತ್ತು.

ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿ 40 ವರ್ಷ ಪ್ರಾಯದ ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು బంధిసి ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೇವಲ ಒಂದು ವಾರದಲ್ಲಿ ಆರೋಪಿಗೆ ಜಾಮೀನು ಮಂಜೂರಾಗಿತ್ತು.

ಆರೋಪಿಯು ಅಂಗಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿರುವುದರಿಂದ ಆ ಅಂಗಡಿಯ ವ್ಯಾಪಾರ ಪರವಾನಿಗೆಯನ್ನು ರದ್ದುಗೊಳಿಸುವಂತೆ ಸಾರ್ವಜನಿಕರು ಗ್ರಾ. ಪಂಗೆ ಮನವಿ ನೀಡಿದ್ದರು.

ಇದೀಗ ಆರೋಪಿ ಅಶ್ರಫ್ ನ ಗೂಡಂಗಡಿಗೆ ಆಕ್ರೋಶಿತರು ಸೆ.27 ಶುಕ್ರವಾರ ತಡರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ತಡರಾತ್ರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆ ದಾರಿಯಾಗಿ ಸಾಗುತ್ತಿದ್ದ ವಾಹನ ಚಾಲಕರು ಇದನ್ನು ಗಮನಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ .

Related posts

Leave a Comment