
ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ.
ಬಿಜೈ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ ಈ ಘಟನೆ ನಡೆದಿದೆ.
ಕಲರ್ಸ್ ಸ್ಪಾ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ದಾಳಿ ಮಾಡಿದ್ದಾರೆ. ಈ ವೇಳೆ ಇಲ್ಲಿ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದೆ.
ಮಸಾಜ್ ಪಾರ್ಲರ್‌ನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್‌ಗಳನ್ನು ಪುಡಿ ಮಾಡಲಾಗಿದೆ. ಅಲ್ಲಿದ್ದ ಹುಡುಗಿಯರಲ್ಲಿ ನೀವು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಾ.? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲಿದ್ದ ಹುಡುಗಿಯರು ಕಿರುಚಾಡುವ ವೀಡಿಯೋ ವೈರಲ್ ಆಗಿದೆ. ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು.
ಈ ವೇಳೆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಮಂಗಳೂರು ನಗರದಾದ್ಯಂತ ಇರೋ ಮಸಾಜ್ ಸೆಂಟರ್ ಗಳ ಮುಚ್ಚುವಂತೆ ರಾಮ ಸೇನಾ ಆಗ್ರಹಿಸಿದೆ. ಈ ಘಟನೆ ಕುರಿತಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.