ಬಂಟ್ವಾಳ: ಬಹಳ ಕುತೂಹಲ ಮೂಡಿಸಿದ್ದ ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಬ್ಯಾಂಕ್ ಇದರ ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಿದೆ.
ಇದರ ಚುನಾವಣೆಯಲ್ಲಿ ಬಿಜೆಪಿ ಸಹಕಾರಿ ಪ್ರಕೋಷ್ಠ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಗಳಿಸಿದ್ದಾರೆ. ಸ್ಪರ್ಧಿಸಿದ 12 ಸ್ಥಾನಗಳಲ್ಲಿ ಬಿಜೆಪಿ ಸಹಕಾರಿ ಪ್ರಕೋಷ್ಠದ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದು ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅತ್ಯಂತ ಮತಗಳಿಂದ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಜಯಶಾಲಿಗಳಾಗಿದೆ. ರಶ್ಮಿತ್ ಶೆಟ್ಟಿ ಪ್ರಸ್ತುತ ಹೊಕ್ಕಾಡಿಗೋಳಿ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಅಧ್ಯಕ್ಷರಾಗಿ, ರಾಯಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿ, ರಾಯಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಹಾಲಿ ಸದಸ್ಯರಾಗಿ, ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಕಾರ್ಯದರ್ಶಿಯಾಗಿ, ಅಲ್ಲದೆ ವಿವಿಧ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕರಾಗಿ ರಶ್ಮಿತ್ ಶೆಟ್ಟಿ ಆಯ್ಕೆಯಾಗಿದ್ದಾರೆ.

