Mangalore and Udupi news
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮಾದಕ ವಸ್ತುಗಳ ಮಾರಾಟ ಸಾಗಾಟ – ಆರು ಮಂದಿ ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಚಂದನ್ ಮತ್ತು ಶರತ್ ಮತ್ತು ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಇತರ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್‌ ಬಾಲಾಜಿ ಮತ್ತು ಮುಖೇಶ್‌ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.

ಮಂಗಳೂರು| ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ವಿದೇಶಿ ಪ್ರಜೆ ಸೇರಿ 6 ಮಂದಿ ಆರೋಪಿಗಳ ಬಂಧನ

ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. 11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ.

ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್‌ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.

Panambur police have arrested six accused for selling and transporting drugs.
Chandan, Sarath, Madhusudhan Konchadi, Dhanush Akash Bhavan, Nigerian nationals Michael Balaji and Mukesh Kumar are the arrested accused.

Related posts

Leave a Comment