Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ.!!

ಬೆಳ್ತಂಗಡಿ : ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ.

ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಆತ್ಮಹತ್ಯೆ ಮಾಡಿಕೊಂಡ ತಯವತಿಯಾಗಿದ್ದಾಳೆ.

ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಪ್ರಿಯಾಂಕ ಆತ್ಮಹತ್ಯೆಗೆ ಯತ್ನಿಸಿದ್ದಳು. ಇದರಿಂದ ಗಂಭೀರ ಸ್ಥಿತಿಯಲ್ಲಿದ್ದ ಪ್ರಿಯಾಂಕ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ವಿಷ ಪದಾರ್ಥ ಸೇವಿಸಲು ಕಾರಣವೇನೆಂದು ಇನ್ನೂ ಸ್ಪಷ್ಟವಾಗಿಲ್ಲ. ಮೃತ ಪ್ರಿಯಾಂಕ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ(BSC) ಕಲಿಗೆಯ ವಿದ್ಯಾರ್ಥಿನಿಯಾಗಿದ್ದರು.

A tragic incident took place in Kokkada in Beltangadi where a college student succumbed to poison. Priyanka D’Souza (19) is a survivor who committed suicide.

Related posts

Leave a Comment