ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಸೇಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ವಿಚಾರವಾಗಿ ಜಗಳ ನಡೆದಿದೆ. ಕೊನೆಗೆ ಈ ಜಗಳ ತಾರಕ್ಕೇರಿ ಸರವಣನ್ ಕಂದಗುರುವನ್ನು ತಳ್ಳಿದ್ದಾನೆ. ಪರಿಣಾಮ ಕಂದಗುರು ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎನ್ನಲಾಗಿದೆ. ಕಂದಗುರುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಸಾವನ್ನಪ್ಪಿದ್ದಾನೆ.
ಈ ಘಟನೆಯ ಬೆನ್ನಲ್ಲೇ ಸೇಲಂ ಪೊಲೀಸರು ಸರವಣನ್‌ನನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ಕಾನೂನು ಕ್ರಮಗಳಿಗಾಗಿ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಜಗಳಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
