ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ. ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಅನಿಲ್ (47) ಮೃತ ದುರ್ದೈವಿ, ಉಮಾ (45) ಗಂಭೀರಗೊಂಡ ಪತ್ನಿ.
ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದ ಅನಿಲ್, ಹೌಸಿಂಗ್ ಬೋರ್ಡ್‌ನಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಜೊತೆ ವಾಸವಿದ್ದರು. ಹಲವು ವರ್ಷಗಳಿಂದ ಕುಣಿಗಲ್ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ಸ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು.
ಆತ್ಮಹತ್ಯೆಗೆ ಶರಣಾದ ಅನಿಲ್ ಅನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ ಇತ್ತಿಚೆಗೆ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಸುಮಾರು 8 ರಿಂದ 10 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗ್ತಿದೆ.
ಸಾಲಗಾರರ ಕಿರುಕುಳಕ್ಕೆ ಬೇಸತ್ತು ನಿನ್ನೆ ಸಂಜೆ ತಮ್ಮ ಮನೆಯಲ್ಲಿ ಮಾತ್ರೆ ಸೇವಿಸಿ ಪತಿ, ಪತ್ನಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಡ ಅನಿಲ್ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಪತ್ನಿ ಉಮಾಗೆ ಕುಣಿಗಲ್ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಕೆ.ವಿ. ಹಾಗೂ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The incident took place in the housing board of Kunigal town of Tumkur district where a couple tried to commit suicide by taking pills because they could not bear the debt. It is learned that the husband has died and the condition of the wife is critical. Anil (47) is the dead unfortunate, Uma (45) is the wife who is seriously injured.