Mangalore and Udupi news
Blogಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುಳ್ಯ: ಯಮನಾಗಿ ಬಂದ KSRTC ಬಸ್‌ – ಅಕ್ಕ ಸಾವು, ತಂಗಿಗೆ ಗಂಭೀರ ಗಾಯ.!!


ಸುಳ್ಯ : ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ವಿದ್ಯಾರ್ಥಿನಿ ಸಾವನಪ್ಪಿದ ಘಟನೆ ಸುಳ್ಯದ ಪರಿವಾರಕಾನ -ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ನ.08 ಶುಕ್ರವಾರ ಸಂಜೆ ಸಂಭವಿಸಿದೆ.

ಮೃತರನ್ನು ಪುತ್ತೂರಿನ ಖಾಸಗಿ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಎಂಬವರ ಪುತ್ರಿ ರಚನಾ (20) ಎಂದು ಗುರುತಿಸಲಾಗಿದೆ. ಆಕೆಯ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ (16) ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ಸುಳ್ಯ| ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ; ದ್ವಿಚಕ್ರ ವಾಹನ ಸವಾರೆ ವಿದ್ಯಾರ್ಥಿನಿ ಮೃತ್ಯು

ರಚನಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಸಹೋದರಿ ಅನನ್ಯ ಅವರನ್ನು ಕುಳ್ಳಿರಿಸಿಕೊಂಡು ಸುಳ್ಯದಿಂದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಸೂಂತೋಡು ಎಂಬಲ್ಲಿ ಡಿಕ್ಕಿಯಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಚನಾ ಅವರು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಸಹ ಸವಾರೆ ಅನನ್ಯ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೊಲೀಸರು ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.

Sullia : A tragic accident on Friday evening claimed the life of a young girl student and left her sister critically injured after a KSRTC bus collided with their scooter in Sullia. The crash took place at Sonthodu, along the Parivarakana-Ubaradka road.

The deceased, Rachana (20), a second-year student at a private college in Puttur, succumbed to her injuries after the head-on collision.

Related posts

Leave a Comment