
ಸುಳ್ಯ : ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
“ಓಂ ಶಾಂತಿ ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಅಣ್ಣ” ಎಂದು ವಾಟ್ಸಾಪ್ ಗೆ ಸ್ಟೇಟಸ್ ಹಾಕಿ ಮನೆಯ ಸಮೀಪವಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುರುಷೋತ್ತಮ್ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಪತ್ನಿ ಹಾಗೂ ಇಬ್ಬರ ಮಕ್ಕಳನ್ನ ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.