ಮಂಗಳುರು: ರಜೆಯ ಸಮಯ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ ದುರಂತ ಪ್ರಕರಣಕ್ಕೆ ಸಂಬ0ಧಿಸಿದ0ತೆ ರೆಸಾರ್ಟ್ ಗೆ ಬೀಗ ಜಡಿದ ಅಧಿಕಾರಿಗಳು ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬ0ಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮ್ಯಾನೇಜರ್ ಭರತ್ ಎಂದು ಗುರುತಿಸಲಾಗಿದೆ. ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಆನ್ಲೈನಲ್ಲೇ ರೂಂ ಬುಕ್ ಮಾಡಿ ಮೂವರು ಒಟ್ಟಾಗಿ ಮಂಗಳೂರಿನ ಸೋಮೇಶ್ವರ ಬೀಚ್ ಬಳಿಯ ಖಾಸಗಿ ರೆಸಾರ್ಟಿನ ಈಜು ಕೊಳಕ್ಕಿಳಿದು ವಿಲ ವಿಲ ಒದ್ದಾಡಿ ಪ್ರಾಣ ಕಳಕೊಂಡಿದ್ದಾರೆ. ಮೈಸೂರಿನ ವಿಜಯನಗರ 2ನೇ ಅಡ್ಡರಸ್ತೆಯ ನಿವಾಸಿ ಕೀರ್ತನಾ ಎನ್. (21), ಮೈಸೂರು ಕುರುಬರಹಳ್ಳಿ ನಿವಾಸಿ ನಿಶಿತಾ ಎಂ.ಡಿ.(21), ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಪಾರ್ವತಿ ಎಸ್ (20) ಮೃತಪಟ್ಟವರಾಗಿದ್ದು, ಮೂವರು ಒಂದೇ ಕಾಲೇಜಿನಲ್ಲಿ ಅಂತಿಮ ಪದವಿ ಓದುತ್ತಿದ್ದರು ಎಂದು ತಿಳಿದು ಬಂದಿದೆ.
ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ರವಿವಾರ ತಡರಾತ್ರಿ ಆಗಮಿಸಿದ್ದು, ಮೂವರ ಮೃತದೇಹ ವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಮೂವರ ಮೃತದೇಹವನ್ನು ತಡರಾತ್ರಿ ಮೈಸೂರು ಗೆ ಕೊಂಡೊಯ್ಯಲಾಗಿದೆ. ಈ ಘಟನೆಗೆ ಸಂಬ0ಧಿಸಿದ0ತೆ ಬಂಧಿತ ಇಬ್ಬರನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.