Mangalore and Udupi news
ಅಪರಾಧಪ್ರಸ್ತುತರಾಜ್ಯ

ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ

ಬೆಳಗಾವಿ: ತಹಸೀಲ್ದಾರ್‌ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಏಕಾಏಕಿ ವರ್ಗಾವಣೆ ಮಾಡಿದ ಹಿನ್ನೆಲೆ, ತಹಶೀಲ್ದಾರ್ ಕಚೇರಿ ದ್ವೀತಿಯ ದರ್ಜೆ ಗುಮಾಸ್ತ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು, ನಿನ್ನೆ ಬೆಳಗಾವಿ ತಹಶೀಲ್ದಾರ್‌ ಕಚೇರಿಯಿಂದ ಸವದತ್ತಿ ಎಲ್ಲಮ್ಮ ಆಡಳಿತ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.

ವರ್ಗಾವಣೆ ರದ್ದುಗೊಳಿಸುವಂತೆ ತಹಶೀಲ್ದಾರ್‌ ಹಾಗೂ ಡಿಸಿ ಮೊಹಮ್ಮದ್ ರೋಷನ್ ಅವರಿಗೆ ರುದ್ರಣ್ಣ ಮನವಿ ಮಾಡಿದ್ದರು. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಚೇರಿಗೂ ಹೋಗಿ ಅಳಲು ತೋಡಿಕೊಂಡಿದ್ದರು. ಈ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ಕೆಲವೊಂದು ಪೋಸ್ಟ್‌ ಕೂಡ ಹಾಕಿದ್ದರು.

ನಾನು ಜೀವ ಕಳೆದುಕೊಂಡರೆ ಅದಕ್ಕೆ ತಹಶೀಲ್ದಾರ್‌ ಹಾಗೂ ಡಿಸಿ ಕಾರಣ ಎಂದು ಡಿಪಾರ್ಟ್‌ಮೆಂಟ್‌ ವಾಟ್ಸಪ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಘಟನೆ ನಂತರ ಪೋಸ್ಟ್‌ ಡಿಲೀಟ್‌ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಸ್ಥಳಕ್ಕೆ ಡಿಸಿಪಿ ರೊಹಬ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

A government staffer committed suicide, allegedly over the injustice meted out to him by his seniors and Personal Assistant to State Women and Child Welfare Minister Laxmi Hebbalkar in Karnataka’s Belagavi district.

The deceased, identified as Rudaranna Yadavanna who worked as the Second Division Assistant (SDA) at the Tehsildar’s office, named the Personal Assistant of Hebbalkar in his death note.

Related posts

Leave a Comment