Mangalore and Udupi news
ಅಪಘಾತಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಭೀಕರ ರಸ್ತೆ ಅಪಘಾತ: ಮಾಹಾ ಕುಂಭಮೇಳಕ್ಕೆ ತೆರಳಿದ್ದ 5 ಮಂದಿ ಸಾವು.!!

ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ಕಾರೊಂದು ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮಿರ್ಜಾಮುರಾದ್ ಪ್ರದೇಶದ ರೂಪಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಅಪಘಾತದ ತೀವ್ರತೆಗೆ ಕ್ರೂಸರ್ ನಲ್ಲಿದ್ದ ಮಹಿಳೆಯ ತಲೆ ದೇಹದಿಂದ ಬೆರ್ಪಟ್ಟಿತ್ತು. ಬೀದರ್ ಮೂಲದ ಒಂದೇ ಕುಟುಂಬದ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಲಕ್ಷ್ಮೀ (56), ನೀಲಮ್ಮ (55), ಸಂತೋಷ್‌ಕುಮಾರ್ (42), ಸುನೀತಾ (42) ಎಂದು ಗುರುತಿಸಲಾಗಿದೆ.

ಕುಂಭಮೇಳಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಬೀದರ್‌ನ ಲಾಡಗೇರಿ ಬಡಾವಣೆಯ 12 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಬೀದರ್‌ನ ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಪ್ರಯಾಗ್‌ರಾಜ್ ಮತ್ತು ಕಾಶಿಯಲ್ಲಿ ನಡೆದ ಕುಂಭಮೇಳದಲ್ಲಿ ಪಾಲ್ಗೊಂಡು ಅಯೋಧ್ಯೆ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರು. ಈ ಮಧ್ಯೆ, ದಾರಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಭೀಕರ ಅಪಘಾತದಲ್ಲಿ, ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಕಾರಿನೊಳಗೆ ಸಿಲುಕಿಕೊಂಡಿದ್ದರು. ಟ್ರಕ್‌ನಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಪೊಲೀಸರು ಕ್ರೇನ್ ಬಳಸಬೇಕಾಗಿತ್ತು.

Advertisement

 

Related posts

Leave a Comment