Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಡಬ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು; ನಗ-ನಗದು ಕಳವು

ಕಡಬ : ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಭಾನುವಾರ ನಡೆದಿದೆ.

ಬಜಕೆರೆ ನಿವಾಸಿ ಜೇಮ್ಸ್ ಎಂಬವರು ನೆಲ್ಯಾಡಿಯಲ್ಲಿ‌ ನಡೆದ ಕಾರ್ಯಕ್ರಮಕ್ಕೆಂದು ಬೀಗ ಹಾಕಿ ತೆರಳಿದ್ದರು. ಸಂಜೆ ವೇಳೆಗೆ ಮನೆ ಮಂದಿ ಹಿಂತಿರುಗಿದಾಗ ಮನೆಯ ಹಿಂಬಾಗಿಲ ಬೀಗ‌ ಮುರಿದು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.

ಕಡಬ: ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು

ಮನೆಯ ಕಪಾಟಿನಲ್ಲಿದ್ದ 10 ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ನಗದನ್ನು ಕಳ್ಳರು ದೋಚಿದ್ದಾರೆ‌ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಗ್ರಾಮಾಂತರ ಇನ್ಸ್‌ಪೆಕ್ಟರ್ ರವಿ ಬಿ.ಎಸ್., ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Related posts

Leave a Comment