Mangalore and Udupi news
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು : ಲಂಚ ಪಡೆದು ಸಿಕ್ಕಿಬಿದ್ದಿದ್ದ ಪೊಲೀಸ್‌ ಇನ್‌ಸ್ಪೆಕ್ಟರ್, ಸಿಬ್ಬಂದಿಗೆ ಜಾಮೀನು.!!

Advertisement

ಮಂಗಳೂರು : ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಗುರುವಾರ ಜಾಮೀನು ನೀಡಿದ್ದಾರೆ.

ವ್ಯಕ್ತಿಯೊಬ್ಬರ ಸ್ಕೂಟರ್‌ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಜ.೨೭ರಂದು ಬಂಧಿಸಿದ್ದರು. ಅದರಂತೆ ಆರೋಪಿಗಳು ನ್ಯಾಯಾಂಗ ಸೆರೆಯಲ್ಲಿದ್ದರು. ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ಅರುಣ್ ಬಂಗೇರಾ ಮತ್ತು ರಿಹಾನಾ ಪರ್ವೀನ್ ವಾದ ಮಂಡಿಸಿದ್ದರು.

ಜ.27 ರಂದು ವಾಹನ ಬಿಡಿಸಲು ಹೋದ ವಾಹನ ಮಾಲಕನಿಗೆ ಉತ್ತರ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್‌ ಮುಹಮ್ಮದ್ ಶರೀಫ್ ಲಂಚದ ಬೇಡಿಕೆ ಇಟ್ಟಿದ್ದರು. ದೂರುದಾರ ಲಂಚವನ್ನು ನೀಡದಿದ್ದ ಹಿನ್ನೆಲೆಯಲ್ಲಿ ವಾಹನ ಬಿಡಿಸಲು ಸತಾಯಿಸಲಾಗಿತ್ತು. ಆದ್ದರಿಂದ ಅವರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ಬಳಿಕ ಆ ವ್ಯಕ್ತಿಯಿಂದ ಮುಹಮ್ಮದ್ ಶರೀಫ್ ಮತ್ತು ಸಿಬ್ಬಂದಿ ಪ್ರವೀಣ್‌ ನಾಯ್ಕ 3000ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಇಬ್ಬರನ್ನು ಜ.28ರಂದು ಬಂಧಿಸಿದ್ದರು.

Related posts

Leave a Comment