ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಮೂವರು ಚಾಲಾಕಿ ಕಾರುಗಳ್ಳರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದಿಂದ ಬೆಂಗಳೂರಿಗೆ ಬಂದು ಕಳ್ಳರು ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಚಾಲಾಕಿತನದಿಂದ ಸಾಫ್ಟ್ವೇರ್ ಮೂಲಕ ಹ್ಯಾಕ್ ಮಾಡಿ ಕಾರುಗಳ ಡೋರ್ ಓಪನ್ ಮಾಡುತ್ತಿದ್ದರು. ಇದರಿಂದ ಸುಲಭವಾಗಿ ಕಾರು ಕದ್ದು ಪರಾರಿಯಾಗುತ್ತಿದ್ದರು. ಸದ್ಯ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದು ಪೊಲೀಸರ ಅತಿಥಿಯಾಗಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕಾರು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದೆ. ಮತ್ತಷ್ಟು ಮಾಹಿತಿ ಹೊರಬೀಳಲಿದೆ