ಬಂಟ್ವಾಳ : ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ.
ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂಬಾತನನ್ನು ಬಂಟ್ವಾಳ ಸರಪಾಡಿಯ ಮಣಿನಾಲ್ಕೂರು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್‌ಬಿಐ ಬ್ಯಾಂಕಿನಲ್ಲಿ ಸೆ. ೪ ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ. ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
Bantwala police has arrested the accused who stole the cash bag of an ex-soldier customer who had drawn money from SBI bank in BCroad.
Mohammed Farooq (32), a resident of Belthangadi, has been arrested by the police.