ಬಂಟ್ವಾಳ : ಮನೆಯ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂಟುಕುಡೇಲು ನಿವಾಸಿ ಲೀಲಾ ಅವರು ಸೆ.17ರಂದು ತನ್ನ ಮನೆಯ ಬಾಗಿಲುಗಳನ್ನು ಭದ್ರಪಡಿಸಿ, ಮಗಳೊಂದಿಗೆ ಕೊಡಂಗಾಯಿಗೆ ತೆರಳಿದ್ದರು. ಮಧ್ಯಾಹ್ನ ವೇಳೆ ಮನೆಗೆ ಹಿಂತಿರುಗಿದಾಗ ಮನೆಯ ಹಿಂಭಾಗದ ಬಾಗಿಲನ್ನು ಯಾರೋ ಕಳ್ಳರೂ ಮುರಿದಿರುವುದು ಕಂಡುಬಂದಿದೆ.
ಕೂಡಲೇ ಮನೆಯೊಳಗಡೆ ಪ್ರವೇಶಿಸಿ ನೋಡಿದಾಗ ಮನೆಯ ಕೋಣೆಯೊಂದರ ಕಪಾಟಿನ ಒಳಗಡೆ ಇರಿಸಿದ್ದ, ಒಟ್ಟು 36 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವಾಗಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ 1,46,000 ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.