
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ನಂತರ ಪೊಲೀಸರ ಮೇಲೆ ಒತ್ತಡ ಹೇರಿ ಹಿಂದೂಗಳ ದಮನಿಸುವ ಕಾರ್ಯ ನಡೆಯುತ್ತಲೇ ಇದೆ. ಈಗ ಕೇಂದ್ರ ಕಾರಾಗೃಹದಲ್ಲಿ ಜಿಹಾದಿಗಳ ಅಟ್ಟಹಾಸ ಮುಂದುವರಿದಿದೆ. ಸೆರೆಮನೆಯಲ್ಲಿ ವಿವಿಧ ಕಾನೂನು ತಂದು, ಶಾಂತಿ ಕಾಪಾಡಲು ಯತ್ನಿಸಿದ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಇದನ್ನು ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿದೆ. ರಾಜ್ಯದಲ್ಲಿ ಮಹಿಳಾ ಅಧಿಕಾರಿಗಳಿಗೇ ರಕ್ಷಣೆ ಇಲ್ವಾ? ಈ ಬಗ್ಗೆ ಸರ್ಕಾರ ಕಣ್ಣು ಮುಚ್ಚಿ ಕುಳಿತಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ ಒಟ್ಟು ಒಂಬತ್ತು ಕೈದಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜೈಲು ಮುಖ್ಯ ಅಧೀಕ್ಷಕಿ ಅನಿತಾ ದೂರಿನ ಆಧಾರದ ಮೇಲೆ ಕೈದಿಗಳಾದ ಮುಸ್ತಫಾ, ನಸೀರ್, ಬಚ್ಚನ್, ಅಲ್ತಾಫ್ ಸೇರಿದಂತೆ ಒಂಭತ್ತು ಮಂದಿಯ ವಿರುದ್ಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಡಾ. ಅನೀತಾ ಅವರು ಮುಖ್ಯ ಅಧೀಕ್ಷಕಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜೈಲಿನಲ್ಲಿನ ಗುಟ್ಕಾ, ಸಿಗರೇಟ್, ಗಾಂಜಾ, ಮೊಬೈಲ್, ಡಿಜಿಟಲ್ ವಸ್ತುಗಳು, ತಂಬಾಕು ಸೇರಿದಂತೆ ನಿಷೇಧಿತ ವಸ್ತುಗಳನ್ನು ಕಟ್ಟುನಿಟ್ಟಾಗಿ ಬ್ಯಾನ್ ಮಾಡಿದ್ದರು. ಇದನ್ನು ವಿರೋಧಿಸಿ 70ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳು ಜೈಲಿನಲ್ಲಿ ತಮಗೆ ಬೇಕಾದ ವಸ್ತುಗಳು ಸಿಗುತ್ತಿಲ್ಲ, ಸರಿಯಾದ ಊಟ ನೀಡುತ್ತಿಲ್ಲ, ಗುಟ್ಕಾ, ಸಿಗರೇಟ್ ಬೇಕು ಅಂತ ಪ್ರತಿಭಟನೆ ಮಾಡಿದ್ದರು.
ಇದಕ್ಕೂ ಮುನ್ನ ವಿಚಾರಣಾಧೀನ ಕೈದಿ ಮುಸ್ತಾಫಾ ಎಂಬಾತ ಅಧೀಕ್ಷಕಿ ಡಾ. ಅನಿತಾ ಅವರ ಖಾತೆಗೆ ಪೋನ್ ಪೇ ಮೂಲಕ ಹಣ ಹಾಕಿ, ಅಧೀಕ್ಷಕಿ ಲಂಚ ಕೇಳಿದ್ದರು ಅಂತ ಸುಪ್ರೀಂ ಕೋರ್ಟ್ ನ್ಯಾಯಧೀಶರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಈಮೇಲ್ ಮೂಲಕ ದೂರು ನೀಡಿದ್ದರು.
ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನೀತಾ ವಿರುದ್ಧ ಕೈದಿಗಳು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ದುಷ್ಕರ್ಮಿಯೊಬ್ಬನಿಂದ ಆಡಿಯೋ ರೂಪದಲ್ಲಿ ಬೆದರಿಕೆ ಸಂದೇಶ ಬಂದಿತ್ತು. ಇದನ್ನ ಜೈಲಿನಲ್ಲಿರುವ ಕೈದಿಗಳೇ ಕಳುಹಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಈ ಪ್ರಕರಣದ ಹಿಂದೆ 9 ಜನ ಕೈದಿಗಳ ಕೈವಾಡ ಇರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಧೀಕ್ಷಕಿಯ ದಿಟ್ಟ ನಿರ್ಧಾರದಿಂದ ಕೈದಿಗಳು ಪ್ರತಿಭಟನೆಗೆ ಇಳಿದಿದ್ದಾರೆ. ಆದರೆ, ಇದಕ್ಕೆ ಮುಖ್ಯ ಅಧಿಕ್ಷಕಿ ಅನಿತಾ ಅವರು ಬಗ್ಗಲಿಲ್ಲ. ಅದಕ್ಕೆ, ಕೈದಿಗಳು ಕಾರು ಸ್ಫೋಟಿಸಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಅಲ್ಲದೇ, ಕೈದಿಗಳ ಜೊತೆ ಜೈಲಿನ ಸಿಬ್ಬಂದಿ ಮತ್ತು ಅಧಿಕಾರಿಗಳು ಕೂಡ ಕೈ ಜೋಡಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದವರ ವಿರುದ್ಧ ಡಾ. ಅನಿತಾ ಅವರು ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಾಗೇ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದವನ ವಿರುದ್ಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಲಬುರಗಿ ಕೇಂದ್ರ ಕಾರಾಗೃಹದ ದಕ್ಷ ಹಾಗೂ ಪ್ರಾಮಾಣಿಕ ಅಧಿಕ್ಷಕಿ ಅನಿತಾ ಅವರನ್ನು ಅಲ್ಲಿಯ ಕೆಲ ಖೈದಿಗಳು ಬ್ಲಾಕ್ ಮೆಲ್ ಮಾಡಿ ಅವರ ವಾಹನ ಸ್ಫೋಟ ಮಾಡಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವದನ್ನು ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ದಕ್ಷ ಪ್ರಾಮಾಣಿಕ ಕೇಂದ್ರ ಕಾರಾಗೃಹ ಅಧಿಕ್ಷಕಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕಾಗಿ ಅಗ್ರಹಿಸಿ ಹಿಂದೂ ಜಾಗೃತಿ ಸೇನೆ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ಮೂಲಕ ಜಿಲ್ಲಾ ಅಧಿಕಾರಿಗಳ ಮುಖಾಂತರ ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.