Mangalore and Udupi news
ದೇಶ- ವಿದೇಶಪ್ರಸ್ತುತರಾಜ್ಯ

ತಿರುಪತಿ ಲಡ್ಡು ವಿವಾದ: ಎಸ್‌ಐಟಿ ರಚಿಸುವಂತೆ ಸುಪ್ರೀಂ ಆದೇಶ.!

ತಿರುಪತಿ ಲಡ್ಡು ವಿವಾದದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಈ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರ ಪೀಠವು ನಡೆಸುತ್ತಿದೆ. ತಿರುಪತಿ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ವಿಚಾರಣೆ ನಡೆಸಿದೆ.

What's the Controversy Surrounding the Tirupati Laddu? Lab Reports Reveal  Animal Fat in the Sacred Offering | by Toofani Times | Sep, 2024 | Medium

ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್‌ಗೆ ಹೇಳಿಕೆ ನೀಡಿದ್ದು, ಎಸ್‌ಐಟಿಯ ಮೇಲೆ ಕೇಂದ್ರದ ಹಿರಿಯ ಅಧಿಕಾರಿ ನಿಗಾ ವಹಿಸಬೇಕು, ಇದರಿಂದ ಜನರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ತಿಳಿಸಿದರು.

ಪ್ರಕರಣ ಸಂಬಂಧ ಸ್ವತಂತ್ರ ಎಸ್‌ಐಟಿ ರಚನೆಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಸಿಬಿಐ ಮತ್ತು ರಾಜ್ಯ ಸರ್ಕಾರದಿಂದ ತಲಾ ಇಬ್ಬರು ಸದಸ್ಯರಾಗಬಹುದು. ಇದಲ್ಲದೇ ಎಫ್‌ಎಸ್‌ಎಸ್‌ಎಐ ಸದಸ್ಯನನ್ನೂ ಈ ಸಮಿತಿಯಲ್ಲಿ ಇರಿಸಬೇಕು. ಇದು ಕೋಟ್ಯಂತರ ಜನರ ನಂಬಿಕೆಯ ಪ್ರಶ್ನೆಯಾಗಿದೆ ಎಂಸು ಸುಪ್ರೀಂ ಸೂಚಿಸಿದೆ.

Tirupati laddu case hearing: Supreme Court orders fresh investigation, forms 5-member SIT

The Supreme Court ordered a fresh investigation into the Tirupati laddu row and constituted a new five-member Special Investigation Team (SIT). The SIT will consist of officers of the Central Bureau of Investigation, Andhra Pradesh Police and the Food Safety and Standards Authority of India.

Related posts

Leave a Comment