Mangalore and Udupi news
ಅಪಘಾತರಾಜ್ಯ

ಪತಿ ಹಾಗೂ ಮನೆಯವರಿಂದ ವರದಕ್ಷಿಣೆ ಕಿರುಕುಳ – ಇಬ್ಬರು ಜೀವಾಂತ್ಯ

ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಪತಿ ಮತ್ತು ಆತನ ಕುಟುಂಬಸ್ಥರಿ0ದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ ಬೇಸತ್ತು ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ.

ಅ. 6ರ ಭಾನುವಾರ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿರುವ ತಾಯಿಯ ಮನೆಗೆ ಬಂದಿದ್ದ ಸೌಮ್ಯ, ರಾತ್ರಿ ಮನೆಯಿಂದ ಹೊರ ಬಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದರು.

ಮೃತ ಮಹಿಳೆಯ ಪೋಷಕರು ಆಕೆಯ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

An incident took place in Bangarapet town where a tired woman jumped into a lake and committed suicide due to constant dowry harassment by her husband and his family members. The woman who committed suicide has been identified as Soumya (25) of Kanganallur village of KGF.

ಗೃಹಿಣಿಯ ಕತ್ತು ಹಿಸುಕಿ ಕೊಲೆ

ಹುಬ್ಬಳ್ಳಿ: ತವರು ಮನೆಯಿಂದ ವರದಕ್ಷಿಣೆ ತರದ್ದಕ್ಕೆ ಗಂಡನ ಮನೆಯವರು ಗೃಹಿಣಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿಶಾಲ ನಗರದಲ್ಲಿ ನಡೆದೆ. ಹೀನಾ ಕೌಸರ(28) ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಗೃಹಿಣಿ. ಎರಡೂ ವರ್ಷದ ಹಿಂದೆ ಮಹಮ್ಮದ್ ಅಜರುದ್ದೀನ್ ಎಂಬಾತನೊಂದಿಗೆ ಹೀನಾ ಮದುವೆಯಾಗಿತ್ತು. ಮದುವೆಯ ಹೊಸತರಲ್ಲಿ ಎಲ್ಲವೂ ಚೆನ್ನಾಗಿ ಇತ್ತು. ನಂತರ ಮಹಮ್ಮದ್ ಕುಟುಂಬಸ್ಥರು ಹೀನಾಗೆ ವರದಕ್ಷಿಣೆ ತರುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.

ಈ ಹಿಂದೆ ಹಲವು ಬಾರಿ ಮಹಮ್ಮದ್ ಕುಟುಂಬಸ್ಥರಿಗೆ ಹಿರಿಯರು ಬುದ್ಧಿವಾದ ಹೇಳಿದ್ದರು. ಆದರೂ ಹೀನಾಳಿಗೆ ವರದಕ್ಷಿಣೆ ಕಿರುಕುಳ ಮಾತ್ರ ಮುಂದುವರೆದಿತ್ತು.

ಭಾನುವಾರವೂ ವರದಕ್ಷಿಣೆ ತರುವಂತೆ ಹೀನಾಳೊಂದಿಗೆ ಮಹಮ್ಮದ್ ಕುಟುಂಬಸ್ಥರು ಜಗಳವಾಡಿದ್ದರು. ಗಂಡ ಮಹಮ್ಮದ್ ಅಜರುದ್ದೀನ್, ಅತ್ತೆ ಫರಿದಾಬಾನು, ಮಾವ ಕರೀಮ್‌ಸಾಬ್, ಹಾಗೂ ನಾದಿನಿ ಶಬ್ಬೋ ಸೇರಿ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಆರೋಪಿಸಿ ಹೀನಾ ತಂದೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

Hubli: An incident took place in the VIshalnagar of Hubli where a housewife was strangled to death by her husband’s family for bringing dowry from her home. Heena Kausara (28) is a housewife victim of dowry harassment.

Related posts

Leave a Comment