Mangalore and Udupi news
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: SSLC ಮತ್ತುPUC ಅಂಕಪಟ್ಟಿ ತಡೆಹಿಡಿದ E.C.R ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ – ABVP ಪ್ರತಿಭಟನೆಗೆ ಮಣಿದ ಕಾಲೇಜು ಆಡಳಿತ ಮಂಡಳಿ

ಉಡುಪಿ : ಅ.22 ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ E.C.R ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ವಿರುದ್ಧ ಅನ್ಯಾಯವಾಗಿ ತಡೆಹಿಡಿದ ವಿದ್ಯಾರ್ಥಿಗಳ SSLC ಮತ್ತುPUC ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ ಪ್ರತಿಭಟಿಸಿ ಯಶಸ್ವಿಯಾಗಿ ಅಂಕಪಟ್ಟಿಯನ್ನು ಹಿಂಪಡೆಯಲಾಯಿತು.

ಕಳೆದ ಕೆಲವು ವರ್ಷಗಳಿಂದ ಅನಧಿಕೃತವಾಗಿ ಅನೇಕ ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಂಕಪಟ್ಟಿಯನ್ನು ತಡೆಹಿಡಿದು ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದ ಅಚಲಾಡಿಯಲ್ಲಿರುವ ಇ.ಸಿ.ಆರ್ ಕಾಲೇಜಿನ ಗೇಟಿನ ಎದುರು ಶೋಷಿತ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪ್ರಾಂಶುಪಾಲರು ಬಂದು ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು ಹಿಡಿದರು.

ನಂತರ ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಗಣೇಶ್ ಪೂಜಾರಿ ಅವರು ಯುಜಿಸಿ ನಿಯಮ ಬಾಹಿರವಾಗಿ ಅನಧಿಕೃತವಾಗಿ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ತಡೆಹಿಡಿದಿರುವುದನ್ನು ಈ ಕೂಡಲೇ ಹಿಂದಿರುಗಿಸುವಂತೆ ಮನವರಿಕೆ ಮಾಡಿ ಅಲ್ಲಿ ಸೇರಿದ್ದ 10 ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಕಾಲೇಜಿನಿಂದ ಯಶಸ್ವಿಯಾಗಿ ಹಿಂಪಡೆಯಲಾಯಿತು.

ನಂತರ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಂಚಾಲಕ ಕಾರ್ತಿಕ್ ಎಂ ಈ ಕಾಲೇಜಿನಿಂದ ನೂರಾರು ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದು ಮುಂದೆ ಬರುವಂತಹ ದಿನಗಳಲ್ಲಿ ಎಲ್ಲರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಎಬಿವಿಪಿ ನೇತೃತ್ವ ವಹಿಸುತ್ತದೆ ಎಂದು ತಿಳಿಸಿದರು.

ಪ್ರತಿಭಟನೆ ಸಂದರ್ಭ ಕರ್ನಾಟಕ ದಕ್ಷಿಣ ಪ್ರಾಂತ ಸಾಮಾಜಿಕ ಜಾಲತಾಣ ಸಹ ಸಂಚಾಲಕ ಶ್ರೀವತ್ಸ, ಉಡುಪಿ ತಾಲೂಕು ಸಂಚಾಲಕ ಶ್ರೇಯಸ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ ಮತ್ತು ಪ್ರಮುಖರಾದ ಸ್ವಸ್ತಿಕ್ ಕಿಶೋರ್,ಶಶಾಂಕ್, ನವೀನ್ ಉಪಸ್ಥಿತರಿದ್ದರು ವಿದ್ಯಾರ್ಥಿಯಾದ ರೋಶನ್ ತನಗಾದ ಸಮಸ್ಯೆಯನ್ನು ವಿವರಿಸಿದರು ಹಾಗೂ ಕೋಟ ಠಾಣಾ ಉಪನಿರೀಕ್ಷಕರದ ರಾಘವೇಂದ್ರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿರಿದ್ದರು.

Udupi: ABVB has protested against the non-return of SSLC and PUC mark cards of Students who studied in ECR ​​Group of Institutes at Achaladi. The college returned the mark sheets to the students.

ABVP-led protest was held in front of the gate of the college by the students who had been illegally withholding the SSLC and PUC mark cards of many students for the past few years.

Related posts

Leave a Comment