Mangalore and Udupi news
ಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತ

ಉಡುಪಿ: ಕಲುಷಿತ ನೀರು ಸೇವನೆಯಿಂದ ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥ.!!

ಉಡುಪಿ : ಕಲುಷಿತ ನೀರು ಸೇವಿಸಿದ ಪರಿಣಾಮ ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡಿನಲ್ಲಿ ಕುಡಿಯುವ ನೀರು ಸಂಪೂರ್ಣವಾಗಿ ಕಲುಷಿತಗೊಂಡ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆಂದು ಮಾಹಿತಿ ದೊರೆತಿದೆ.

ಕಲುಷಿತ ನೀರು ಸೇವಿಸಿದ ಹಿನ್ನೆಲೆ ಗ್ರಾಮದಲ್ಲಿ ಸರಿ ಸುಮಾರು 500 ಹಾಗೂ ಮೇಡಿಕಲ್ ನಲ್ಲಿ 600ಕ್ಕೂ‌ ಹೆಚ್ಚು ಜನ ಅಸ್ವಸ್ಥರಾಗಿದ್ದು ವಾರ್ಡಿನ ಪ್ರತಿ ಮನೆಯಲ್ಲಿ ಮೂರಕ್ಕೂ ಅಧಿಕ ಜನರಿಗೆ ವಾಂತಿ ಭೇದಿ ಆಗಿದೆ . ಇದರಲ್ಲಿ 80 ವರ್ಷದ ವೃದ್ಧನ ಸ್ಥಿತಿ ಗಂಭೀರದ್ದು ಕುಂದಾಪುರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಕಲುಷಿತ ನೀರು ಎಲ್ಲಿಂದ ಸರಬರಾಜು ಆಗಿದೆ.? ಟ್ಯಾಂಕ್ ನೀರು ಸರಬರಾಜು ಮಾಡಲಾಗಿತ್ತೇ.? ಅಥವಾ ಗ್ರಾಮ ಪಂಚಾಯತ್ ನ ನೀರು ಸರಬರಾಜು ವ್ಯವಸ್ಥೆಯಲ್ಲಿ ಏನಾದರೂ ದೋಷವಾಗಿದೆಯಾ.? ಎಂಬುದರ ಬಗ್ಗೆ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.

Udupi: More than a thousand people are sick due to consumption of contaminated water

Related posts

Leave a Comment