
ಉಡುಪಿ: ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊ0ದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಲೆವೂರು ಗುಡ್ಡೆಯಂಗಡಿಯಲ್ಲಿ ಈ ಘಟನೆ ನಡೆದಿದೆ. ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯ ಗೋಡೌನ್‌ನಲ್ಲಿ ಬೆಂಕಿ ದುರಂತ ನಡೆದಿದ್ದು, ಸರಿ ಸುಮಾರು 40 ಲಕ್ಷ ರೂಪಾಯಿ ನಷ್ಟವಾಗಿದೆ.
ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.