ಉಡುಪಿ: ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ನಾಪತ್ತೆಯಾದ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಕಾಣೆಯಾದವರ ಬಗ್ಗೆ ಮಾಹಿತಿಯಿದ್ದಲ್ಲಿ ಸಂಪರ್ಕಿಸುವ0ತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- ವ್ಯಕ್ತಿ ನಾಪತ್ತೆ:
ಉಡುಪಿ ನಗರದ ಕಡಿಯಾಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಜಯ ಶೆಟ್ಟಿ(57) ಎಂಬವರು ಸೆ.6ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿದ್ದಾರೆ.
157 ಸೆ.ಮೀ. ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.
- ಒಡಿಸ್ಸಾದ ಯುವಕ ನಾಪತ್ತೆ:
ಮೂಲತಃ ಒಡಿಸ್ಸಾ ರಾಜ್ಯದ ಮಯೂರ್ಭಂಜ್ ಜಿಲ್ಲೆ ಸುಲಿಯಾಪದ ತಾಲೂಕು ಕದಾಕೋಥಾ ಗ್ರಾಮದ ನಿವಾಸಿ, ಪ್ರಸ್ತುತ ನಗರದ ನಿಟ್ಟೂರಿನ ಬಾಳಿಗ ಫಿಶ್‌ನೆಟ್ ಒಡಿಸ್ಸಾ ಹಾಸ್ಟೆಲ್‌ನಲ್ಲಿ ವಾಸವಿದ್ದ ಬನಮಾಲಿ ನಾಯ್ಕ್ (29) ಎಂಬ ಯುವಕ ಸೆ.12ರಿಂದ ನಾಪತ್ತೆಯಾಗಿದ್ದಾರೆ.
170 ಸೆಂ.ಮೀ. ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದ ಇವರು, ಹಿಂದಿ ಹಾಗೂ ಓಡಿಯಾ ಭಾಷೆ ಮಾತನಾ ಡುತ್ತಾರೆ.
- ಬಾಡಿಗೆ ಮನೆಯಲ್ಲಿದ್ದ ಅಂಜುಬಾನು ನಾಪತ್ತೆ:
ಮೂಲತಃ ದಾವಣಗೆರೆ ಜಿಲ್ಲೆ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಯುವತಿ ಆ. 23ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 3 ಇಂಚು ಎತ್ತರ, ಉದ್ದಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿ ಸಬಹುದು ಎಂದು ಪ್ರಕಟಣೆ ತಿಳಿಸಿದೆ.